ಮುಂಬೈ : ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರ ಮನೆಯ ಮುಂದೆ ಗುಂಡಿನ ಸದ್ದು ಕೇಳಿ ಬಂದಿದೆ. ಇಂದು ಬೆಳಗಿನ ಜಾವ 5 ಗಂಟೆ ಹೊತ್ತಿಗೆ ಗುಂಡಿನ ಸದ್ದು ಕೇಳಿ ಬಂತು ಎಂದು ಪೊಲೀಸರು ಹೇಳಿದ್ದಾರೆ.
ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಸಮೀಪ ಕೆಲವು ಅಪರಿಚಿತರು ಮೋಟರ್ ಸೈಕಲ್ ನಲ್ಲಿ ಬಂದು ಹಲವು ಸುತ್ತು ಗುಂಡು ಹಾರಿಸಿ ಪರಾರಿಯಾದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಲ್ಮಾನ್ ಖಾನ್ ಮನೆಯ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕ್ರೈಮ್ ಬ್ರಾಂಚ್ ನ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.






