ತುಮಕೂರು : ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಿಂದಾಗಿ ಗ್ರಾಮೀಣ ಪ್ರದೇಶದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ. ಇದು ಮಾಜಿ ಮುಖ್ಯಮಂತ್ರಿ ಮಾಡಿದ ಆರೋಪ. ಈ ಮೂಲಕ ಗ್ರಾಮಾಂತರ ಪ್ರದೇಶದ ಮಹಿಳೆಯರಿಗೆ ಅವರು ಅವಮಾನ ಮಾಡಿದ್ದಾರೆ.
ತುಮಕೂರಿನ ತುರುವೇಕೆರೆಯಲ್ಲಿ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹಳ್ಳಿಯ ಹೆಣ್ಣು ಮಕ್ಕಳ ಬಗ್ಗೆ ಲಘುವಾಗಿ ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ.
ಸ್ವಲ್ಪ ಗಮನ ಇಟ್ಟು ಎರಡು ಮಾತುಗಳನ್ನು ಕೇಳಿ. ಇವತ್ತಿನ ಕಾಂಗ್ರೆಸ್ ಸರ್ಕಾರ ಕಳೆದ ಚುನಾವಣೆಯಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದರಿಂದ ನನ್ನ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪಿದ್ದಾರೆ. ಈ ರೀತಿ ಉಚಿತ ಯೋಜನೆ ಕೊಟ್ಟರೆ ಹಳ್ಳಿಯ ತಾಯಂದಿರ ಬದುಕು ಏನಾಗಬೇಕು? ಈ ಬಗ್ಗೆ ಎಲ್ಲರೂ ಯೋಚನೆ ಮಾಡಬೇಕಿದೆ. ನಿಮ್ಮ ಕುಟುಂಬದ ಬದುಕೇನಾಗಬೇಕು ಯೋಚನೆ ಮಾಡಬೇಕಿದೆ. ಅವರಿಗೆ ಐದು ಉಚಿತ ಗ್ಯಾರಂಟಿ ಬಿಟ್ಟು ಬೇರೆ ಏನೂ ಇಲ್ಲ”.
ಈ ಮಾತುಗಳನ್ನು ಹೇಳುವ ಮೂಲಕ ಮಹಿಳಾ ಸಮುದಾಯವನ್ನೇ ಅವಮಾನಿಸಿದ ಕುಮಾರಸ್ವಾಮಿ ಕೆಟ್ಟು ಹೋಗುವುದು ಎಂದರೇನು ಎಂಬುದನ್ನು ಹೇಳಿಲ್ಲ. ಹೆಣ್ಣು ಮಕ್ಕಳು ಕೆಟ್ಟಿದ್ದಾರೆ ಎಂದು ಹೇಳುವುದು ಅವರಿಗೆ ಮಾಡುವ ಅವಮಾನವಲ್ಲವೆ?.






