ಮಂಡ್ಯ: ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಶಾಸಕ ಹೆಚ್ ಡಿ ರೇವಣ್ಣ ಇಂಗ್ಲೆಂಡಿಗೆ ಹೋಗಿದ್ದಾಗ ಇಂತಹ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ ? ಮಾಜಿ ಶಾಸಕ ಎಲ್ ಆರ್ ಶಿವರಾಮೇಗೌಡರ ಪ್ರಕಾರ ಇಂಗ್ಲೆಂಡಿಗೆ ಹೋದಾಗ ಇಂತಹ ಪ್ರಕರಣದಲ್ಲಿ ರೇವಣ್ಣ ಸಿಕ್ಕಿ ಹಾಕಿಕೊಡಿದ್ದರು. ಹಾಗೆ ತಗಲಾಕೊಂಡಿದ್ದರು ಎಂದು ಅವರು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇವಣ್ಣ ಅಂತಹ ಒಳ್ಳೆಯ ನಡವಳಿಕೆ ವ್ಯಕ್ತಿಯಲ್ಲ, ನಾನು ರೇವಣ್ಣ ಇಂಗ್ಲೆಂಡ್ಗೆ ಹೋಗಿದ್ದಾಗ ಅಲ್ಲಿ ರೇವಣ್ಣ ಸಿಕ್ಕಿಹಾಕಿಕೊಂಡಿದ್ರು. ಹಾಸನದಲ್ಲಿ ನಡೆದಂತಹ ಘಟನೆಯೇ ಅಂದು ಇಂಗ್ಲೆಂಡ್ನಲ್ಲೂ ನಡೆದಿತ್ತು ಎಂದು ಶಿವರಾಮೇಗೌಡ ಹೇಳಿದರು.
ಬ್ಲ್ಯೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟೊಂದು ವಿಡಿಯೋ ಇದಾವೋ ಇಲ್ಲ ಗೊತ್ತಿಲ್ಲ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗುಡುಗಿದರು. ದೇವೇಗೌಡರಿಗೆ ಈ ವಯಸ್ಸಿನಲ್ಲಿ ಇಂತಹ ನೀಚ ಕೃತ್ಯವನ್ನು ನೋಡುವ ದೌರ್ಭಾಗ್ಯ ಬಂದಿದೆ. ನನ್ನನ್ನೂ ಸೇರಿದಂತೆ ಹಲವರನ್ನ ಮುಗಿಸಿದ್ದು ಇದೇ ಕಂಪನಿ ಎಂದು ಆರೋಪಿಸಿದರು.
ಗಂಗಾಧರ್ ಕೊಲೆ ಕೇಸ್ನಲ್ಲಿ ನನ್ನನ್ನು ಸೇರಿಸಲು ದೇವೇಗೌಡರು 8 ಕಿಲೋ ಮೀಟರ್ ಪಾದಯಾತ್ರೆ ಮಾಡಿದ್ದರು. ಇದೀಗ ನೊಂದವರ ಶಾಪವೇ ಇಂದು ಅವರಿಗೆ ತಟ್ಟಿದೆ ಎಂದರು.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಸನಕ್ಕೆ ಭೇಟಿ ನೀಡಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸಬೇಕು. ಅನ್ಯಾಯ ಆಗಿರುವುದು ನಿಮ್ಮ ಕುಟುಂಬದಿಂದ. ಹಾಗಾಗಿ ನೀವು ಧಮ್ಕಿ ಹಾಕೋದನ್ನು ಬಿಟ್ಟುಬಿಡಿ. ಹಾಸನ ಡಿಸಿ ಅವರ ಬಗ್ಗೆ ಕುಮಾರಸ್ವಾಮಿ ಅವರು ಮಾತನಾಡಿದ್ದು ಸರಿಯಲ್ಲ. ಅವರು ಸರಿಯಾಗಿ ಮಾತನಾಡಿದ್ದಾರೆ ಎಂದರು.
.






