ಉತ್ತರಪ್ರದೇಶದ ಸಾಮೂಹಿಕ ಅತ್ಯಾಚಾರ ಪ್ರಕರಣ: ಒಬ್ಬನ ಬಂಧನ

ಲಖ್ನೋ: ಉತ್ತರಪ್ರದೇಶದ ಲಖ್ನೋದ ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಎಸಗಿದ್ದ ಇನ್ನಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ.ಆರೋಪಿಗಳನ್ನು ವಿನಯ್, ಸಂತೋಷ್ ಮತ್ತು ಶಿವಕುಮಾರ್ ಎಂದು ಗುರುತಿಸಲಾಗಿದೆ. ಹರ್ದೋಯಿಂದ ಆಗಮಿಸಿದ್ದ ಯುವತಿಯನ್ನ ಮೋಸದಿಂದ ಅಪಹರಿಸಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಲಾಗಿತ್ತು. ಈ ಕುರಿತು ಮಹಿಳೆ ದೂರು ನೀಡಿದ್ದರು.

ಉತ್ತರಪ್ರದೇಶದಲ್ಲಿ ಇಂಥ ಪ್ರಕರಣಗಳು ಸಾಮಾನ್ಯ ಸಂಗತಿಗಳಾಗಿ ಪರಿಣಮಿಸಿವೆ. ಪ್ರತಿದಿನ ಇಂಥ ಪ್ರಕರಣಗಳು ಉತ್ತರಪ್ರದೇಶದಲ್ಲಿ ವರದಿಯಾಗುತ್ತಿವೆ. ಇತ್ತೀಚೆಗೆ ರಾಮಪುರದಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

12-14 ಬಾಲಕರ ಗುಂಪು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ವೀಡಿಯೋ ಲಭ್ಯವಾಗಿತ್ತು. ವೀಡಿಯೋದಲ್ಲಿ ತನ್ನನ್ನು ಬಿಟ್ಟುಬಿಡುವಂತೆ ಮಹಿಳೆ ಅಂಗಲಾಚಿ ಬೇಡಿಕೊಳ್ಳುತ್ತಿದ್ದರೂ ಬಾಲಕರು ನಿರ್ದಯದಿಂದ ವರ್ತಿಸಿದ್ದರು. ಇಡೀ ದೃಶ್ಯವನ್ನು ಉದ್ದೇಶಪೂರ್ವಕವಾಗಿ ಚಿತ್ರೀಕರಿಸಿದ್ದ ಬಾಲಕನೊಬ್ಬ, ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್​ಲೋಡ್ ಮಾಡಿದ್ದ.

ಬಾಲಕಿಯರ ಮೇಲೆ ಹಲ್ಲೆ ಮತ್ತು ಲೈಂಗಿಕ ದೌರ್ಜನ್ಯವೆಸಗುತ್ತಿರುವ ಸಂದರ್ಭದಲ್ಲಿ ಬಾಲಕರು ಅಪಹಾಸ್ಯ ಮಾಡುತ್ತಾ, ನಗೆ ಚಟಾಕಿ ಹಾರಿಸುತ್ತಿದ್ದರು. ಇಂಥ ದುರ್ವರ್ತನೆ ತಡೆಯುವ ಸಲುವಾಗಿಯೇ ಆದಿತ್ಯನಾಥ್ ನೇತೃತ್ವದ ಸರ್ಕಾರ ಆಂಟಿ ರೋಮಿಯೋ ಪಡೆ ರಚಿಸಿದೆ. ಆದರೆ, ಮಹಿಳೆಯರು ಮತ್ತು ಬಾಲಕಿಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಇಳಿಕೆಯಾಗಿಲ್ಲ.

ಪ್ರದೀಪ್ ಮಾಲ್ಗುಡಿ ನ್ಯಾಷನಲ್ ಡೆಸ್ಕ್ ಸುದ್ದಿ ಟಿವಿ

0

Leave a Reply

Your email address will not be published. Required fields are marked *