ಹಿರಿಯ ಪತ್ರಕರ್ತ ಶಶಿಧರ ಭಟ್‌ ಅವರ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ

Seniro Journalist Shashidhar Bhat Health Update: ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ

ಬೆಂಗಳೂರು: ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿದ ಸಿಎಂ ಸಿದ್ದರಾಮಯ್ಯ ಅವರು ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ ಎಂದು ತಿಳಿಸಿದ್ದಾರೆ.

ಸುದ್ದಿ ತಿಳಿದ ಸಿಎಂ ಸಿದ್ದರಾಮಯ್ಯ ಕೂಡ ಶಶಿಧರ್ ಭಟ್ ಅವರೊಂದಿಗೆ ಸೋಮವಾರ ಬೆಳಿಗ್ಗೆ ದೂರವಾಣಿ ಮೂಲಕ ಮಾತನಾಡಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.

ಶಶಿಧರ್‌ ಭಟ್‌ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಸಮಾಜದ ಒಳಿತಿಗಾಗಿ ನಿರ್ಭೀತ ಧ್ವನಿಯಾಗಿದ್ದ ಶಶಿಧರ್ ಭಟ್ಟರು ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಶಶಿಧರ್ ಭಟ್ ಅವರ ಈ ಭಾವನಾತ್ಮಕ ಪೋಸ್ಟ್‌ಗೆ ಸಾವಿರಾರು ಅಭಿಮಾನಿಗಳು ಕಾಮೆಂಟ್ ಮೂಲಕ ಭಟ್ಟರ ಬೆನ್ನಿಗೆ ನಿಂತಿದ್ದರು. ನಿಮ್ಮ ಜೊತೆ ನಾವೂ ಇದ್ದೇವೆ ಎಂಬ ಧೈರ್ಯ ತುಂಬುವ ಕೆಲಸ ಮಾಡಿದ್ದರು.

Author

error: