ಗುಜರಾತ್ ವಿರುದ್ಧ ಆರ್ ಸಿಬಿ ಗೆಲುವು; ಪ್ಲೇ ಆಫ್ ಕನಸು ಜೀವಂತ, ಮುಳುಗಿದರೂ ಹುಲ್ಲು ಕಡ್ಡಿ ಆಸರೆ

GT vs RCB : ಗುರಿ ಬೆನ್ನತ್ತಿದ ಆರ್ ಸಿಬಿ, ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 13. 4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಲ್ಕು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿ ಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್, ಶಾರುಖ್ ಖಾನ್ 37 ರನ್, ರಾಹುಲ್ ತೆವಾಟಿಯಾ 35 ರನ್ ಗಳಿಸಿದರೆ, ಡೇವಿಡ್ ಮಿಲ್ನರ್ 20 ಎಸೆತಗಳಲ್ಲಿ 30 ರನ್ ಗಳಿಸಿದರು. ಇದರಿಂದಾಗಿ ಗುಜರಾತ್ 19.3 ಓವರ್‌ಗಳಲ್ಲಿ 147 ರನ್ ಸೇರಿಸಿತು.

ಗೆಲುವಿಗೆ 148 ರನ್ ಗಳ ಗುರಿ ಬೆನ್ನತ್ತಿದ ಆರ್ ಸಿಬಿ, ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 13. 4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು. ಇದರೊಂದಿಗೆ ಆರ್ ಸಿಬಿಯ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ.

ಆರ್ ಸಿಬಿ ಈ ಗೆಲುವಿನೊಂದಿಗೆ ಆಡಿರುವ 11 ಪಂದ್ಯಗಳಲ್ಲಿ ನಾಲ್ಕು ಗೆಲುವಿನೊಂದಿಗೆ ಒಟ್ಟಾರೆ 8 ಅಂಕಗಳನ್ನು ಗಳಿಸಿದೆ ಮತ್ತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ 7ನೇ ಸ್ಥಾನಕ್ಕೆ ಜಿಗಿದಿದೆ.

ಫಾಫ್​ ಡು ಪ್ಲೆಸಿಸ್​ 23 ಎಸೆತಕ್ಕೆ 63 ರನ್ ಬಾರಿಸಿದರು. ಕೇವಲ 3.1 ಓವರ್​ಗಳಲ್ಲಿ 50 ರನ್ ಗಡಿ ದಾಟಿಸಿದ ವಿರಾಟ್ ಕೊಹ್ಲಿ ಮತ್ತು ಫಾಪ್​ ಆರ್ ಸಿಬಿ ಗೆಲುವಿಗೆ ನೆರವಾದರು.

ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಮತ್ತು ವಿಜಕುಮಾರ್ ವಿಶಾಕ್ 2 ವಿಕೆಟ್ ಪಡೆದರೆ, ಕ್ಯಾಮರೂನ್ ಗ್ರೀನ್ ಮತ್ತು ಕರ್ಣ್ ಶರ್ಮಾ 1 ವಿಕೆಟ್ ಪಡೆದರು.

Author

error: