ಗುರುವಾಂವ್ : ಹರಿಯಾಣ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಮೂವರು ಪಕ್ಷೇತರ ಶಾಸಕರು ವಾಪಸ್ ಪಡೆದಿದ್ದಾರೆ. ಇದರೊಂದಿಗೆ ಸೈನಿ ನೇತೃತ್ವದ ಸರ್ಕಾರ ಸದನದಲ್ಲಿ ಬಹುಮತವನ್ನು ಕಳೆದುಕೊಂಡಿದೆ.

ಇಂದು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಮೂವರು ಪಕ್ಷೇತರ ಶಾಸಕರು ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿರುವುದಾಗಿ ಘೋಷಿಸಿದರು. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿಯೂ ಪ್ರಕಟಿಸಿದರು.

ಈ ಮೂವರು ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಭರವಸೆಯನ್ನು ಬಿಜೆಪಿ ನೀಡಿತ್ತು. ಆದರೆ ಈ ಭರವಸೆಯನ್ನು ಈಡೇರಿಸದೇ ಇರುವುದು ಇವರು ಬೆಂಬಲ ವಾಪಸ್ ಪಡೆದುಕೊಳ್ಳುವುದಕ್ಕೆ ಕಾರಣ ಎನ್ನಲಾಗಿದೆ.

Author

Leave a Reply

Your email address will not be published. Required fields are marked *