ಹಾಸನ : ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆಅಪಘಾತದಲ್ಲಿ ಕಾರ್ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದ ಹೊರವಲಯದ ಈಚನಹಳ್ಳಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರ್ ನಲ್ಲಿದ್ದ ಮೂವರು ಮಹಿಳೆಯರು, ಇಬ್ಬರು ಪುರುಷರು ಮತ್ತು ಒಂದು ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.
ಮೃತರೆಲ್ಲರೂ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮ್ಮ ಸಂಬಂಧಿಕರನ್ನು ನೋಡಲು ತೆರಳಿದ್ದರು. ಅಲ್ಲಿಂದ ವಾಪಸ್ ಊರಿಗೆ ಮರಳುವಾಗ ನಿದ್ರೆಯ ಮಂಪರಿನಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಮೃತರನ್ನು ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರಾ, ಚೇತನ್, ರಾಕೇಶ್ (ಚಾಲಕ) ಮತ್ತು ಮಗು ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಅಂದರಹಳ್ಳಿ ಹೊಸಕೋಟೆ ತಾಲೂಕು ಮತ್ತು ಕಾರಹಳ್ಳಿ ಗ್ರಾಮ ದೇವನಹಳ್ಳಿ ತಾಲೂಕಿಗೆ ಸೇರಿದವರು ಎಂದು ತಿಳಿದು ಬಂದಿದೆ.
ಇನ್ನು ಘಟನಾ ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತ ಭೇಟಿ ನೀಡಿದ್ದು, ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
