ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಬುಡಮೇಲಾದ ನೂರಾರು ಮರಗಳು

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಿನ್ನೆ ರಾತ್ರಿ ಇಡೀ ಸುರಿದ ಭಾರೀ ಮಳೆಯಿಂದಾಗಿ ನೂರಾರು ಮರಗಳು ಬುಡಮೇಲಾಗಿವೆ. ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ ಸುರಿದಿದೆ. ಇದರ ಪರಿಣಾಮದಿಂದಾಗಿ ಉಷ್ಣಾಂಶದ ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, 3 -5 ಡಿಗ್ರಿ ಸೆಂಟಿಗ್ರೇಡ್​ ಉಷ್ಣಾಂಶ ಇಳಿದಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೃಷ್ಟವಶಾತ್ ಯಾವುದೇ ಸಾವು – ನೋವುಗಳು ಸಂಭವಿಸಿಲ್ಲ.

0

Leave a Reply

Your email address will not be published. Required fields are marked *