Brand Bengaluru Environment: ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್

Brand Bengaluru Environment: ಬೆಂಗಳೂರು ಇಷ್ಟರ ಮಟ್ಟಿಗೆ ಬೆಳೆಯುತ್ತದೆ ಎಂದು ನಾಡಪ್ರಭು ಕೆಂಪೇಗೌಡರಿಗೆ ತಿಳಿದಿರಲಿಲ್ಲ. ಇಂದು ಆರೋಗ್ಯ, ಶಿಕ್ಷಣ, ಕೈಗಾರಿಕೆ, ಉದ್ದಿಮೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬೆಂಗಳೂರು ಬೆಳೆಯುತ್ತಿದೆ. ನಮ್ಮ ಹಿರಿಯರು ಬೆಂಗಳೂರನ್ನು ಹಸಿರಿನಿಂದ ಕಂಗೊಳಿಸಿದ್ದರು. ಇದನ್ನು ಕಾಪಾಡುವ ಜವಾಬ್ದಾರಿ ನಮ್ಮ ಮೇಲಿದೆ.









