ಹುಬ್ಬಳ್ಳಿ : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣದ ಆರೋಪಿ ಫಯಾಜ್ ನನ್ನು ಸಿಐಡಿ ಪೋಲಿಸರು ತಮ್ಮ ವಶಕ್ಕೆ ಪಡೆದಿದ್ದಾರೆ.
ಮಂಗಳವಾರದಿಂದ ತನಿಖೆ ನಡೆಸುತ್ತಿರುವ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಹೆಚ್ಚಿನ ತನಿಖೆ ನಡೆಸುವುದಕ್ಕೆ ಆರೋಪಿಯನ್ನು ತನ್ನ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರೋಪಿಯನ್ನು ಆರು ದಿನ ಸಿಐಡಿ ವಶಕ್ಕೆ ಒಪ್ಪಿಸಿದೆ.







