ನವದಹಲಿ : ಭಯೋತ್ಪಾದಕರು ಭಾರತದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಅಥವಾ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಿದರೆ, ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸುವವರನ್ನು ನಾವು ಸುಮ್ಮನೆ ಬಿಡುವುದಿಲ್ಲ. ಅವರು ಪಾಕಿಸ್ತಾನಕ್ಕೆ ಓಡಿಹೋದರೆ, ಆ ದೇಶಕ್ಕೂ ನುಗ್ಗಿ ಹೊಡೆಯುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಕ್ರವಾರ ಹೇಳಿದರು..
2019 ರ ನಂತರ ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದಲ್ಲಿ ಭಯೋತ್ಪಾದಕರ ಹತ್ಯೆ ನಡೆಸಿವೆ ಎಂದು ಬ್ರಿಟಿಷ್ ಪತ್ರಿಕೆ “ದಿ ಗಾರ್ಡಿಯನ್” ವರದಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ರಕ್ಷಣಾ ಸಚಿವರು, “ನೆರೆಯ ದೇಶದ ಭಯೋತ್ಪಾದಕರು ಭಾರತದಲ್ಲಿ ಶಾಂತಿ ಕದಡಲು ಪ್ರಯತ್ನಿಸಿದರೆ ಅಥವಾ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದರೆ ನಾವು ಅವರಿಗೆ ತಕ್ಕ ಪ್ರತ್ಯುತ್ತರ ನೀಡುತ್ತೇವೆ” ಎಂದು ಹೇಳಿದರು.
ಉಗ್ರರು ಪಾಕಿಸ್ತಾನಕ್ಕೆ ಓಡಿಹೋದರೆ, ಅವರನ್ನು ಕೊಲ್ಲಲು ನಾವು ಪಾಕಿಸ್ತಾನಕ್ಕೆ ಪ್ರವೇಶಿಸುತ್ತೇವೆ ಎಂದು ಅವರು ಹೇಳಿದರು.







