ವಿರಾಟ್ ಕೊಹ್ಲಿಯ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಪಂಜಾಬ್ ಕಿಂಗ್ಸ್ ವಿರುದ್ಧ ಜಯ ಸಾಧಿಸಿದ. ಇದು 60 ರನ್ಗಳ ಭರ್ಜರಿ ಗೆಲುವು . ಈ ಮೂಲಕ ಟೂರ್ನಿಯಲ್ಲಿ ಸತತ ನಾಲ್ಕನೇ ಜಯ ದಾಖಲಿಸಿದ ಆರ್ ಸಿಬಿ ತನ್ನ ಪ್ಲೇಆಫ್ ಕನಸನ್ನು ಇನ್ನು ಜೀವಂತವಾಗಿಸಿರಿಸಿಕೊಂಡಿರುವುದು ವಿಶೇಷ
ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 241 ರನ್ ಕಲೆಹಾಕಿತು. ಈ ಮೊತ್ತ ಗೆಲುವುಗೆ ಸಾಕಾಯಿತು.
ಗೆಲುವಿಗೆ 242 ರನ್ ಗಳ ಬೃಹತ್ ಗುರಿ ಬೆನ್ನತ್ತಿದ ಪಂಜಾಬ್, 17 ಓವರ್‌ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದರೊಂದಿಗೆ ಪಂಜಾಬ್ ಪ್ಲೇಆಫ್ ರೇಸ್‌ನಿಂದ ಹೊರ ಬಿದ್ದಿದೆ. ಪಂಜಾಬ್ 12 ಪಂದ್ಯಗಳಲ್ಲಿ 4ರಲ್ಲಿ ಮಾತ್ರ ಗೆದ್ದಿದೆ. ಆದರೆ ಆರ್‌ಸಿಬಿ 12 ಪಂದ್ಯಗಳಲ್ಲಿ ಐದನೇ ಗೆಲುವು ದಾಖಲಿಸಿದೆ.
ಆರ್‌ಸಿಬಿ ಪರ ಫಾಫ್ ಡು ಪ್ಲೆಸಿಸ್ ಮತ್ತೊಂದು ಬಾರಿ ಕಳಪೆ ಪ್ರದರ್ಶನ ನೀಡಿದರು. 9 ರನ್ಗೆ ಅವರು ಔಟಾದರು. ಹೀಗಾಗಿ 19 ರನ್ಗೆ ಒಂದು ವಿಕೆಟ್ ಕಳೆದುಕೊಂಡ ಆರ್ಸಿಬಿಗೆ ಸಂಕಷ್ಟ ಶುರುವಾಯಿತು. ಬಳಿಕ ಬಂದ ವಿಲ್ ಜ್ಯಾಕ್ಸ್ ಕೂಡ 12 ರನ್ಗೆ ಸೀಮಿತಗೊಂಡರು. ಆದರೆ, ಮತ್ತೊಂದು ಬದಿಯಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ 92 ರನ್ ಗಳಿಸಿ ಔಟಾದರು. ಈ ಮೂಲಕ ವಿರಾಟ್ ತಮ್ಮ ಒಂಬತ್ತನೇ ಶತಕವನ್ನು ಮಿಸ್ ಮಾಡಿಕೊಂಡರು.
ಆರ್‌ಸಿಬಿ ಪರ ಮೊಹಮ್ಮಸ್ ಸಿರಾಜ್ 3 ವಿಕೆಟ್, ಸ್ವಪ್ನಿಲ್ ಸಿಂಗ್, ಲಾಕಿ ಫರ್ಗ್ಯೂಸನ್ ಹಾಗೂ ಕರಣ್ ಶರ್ಮಾ ತಲಾ 1 ವಿಕೆಟ್ ಪಡೆದರು.
