ಬೆಂಗಳೂರು : ರಾಯಲ್ ಚಾಲೆಂಜರ್ಸ್ ತಂಡ ಈ ಬಾರಿ ಯಾವ ತಂಡಕ್ಕೂ ಸವಾಲನ್ನೇ ನೀಡುತ್ತಿಲ್ಲ. ಇದುವರೆಗೆ ಆಡಿರುವ ಮೂರು ಪಂಡ್ಯಗಳಲ್ಲಿ ಗೆದ್ದಿರುವುದು ಕೇವಲ ಒಂದು ಪಂದ್ಯ ಮಾತ್ರ.
ಹೀಗಾಗಿ ಇವತ್ತಿನ ಪಂದ್ಯ ಬೆಂಗಳೂರು ತಂಡಕ್ಕೆ ಅಗ್ನಿ ಪರೀಕ್ಷೆ. ಯಾಕೆಂದರೆ ಅಂಕ ಪಟ್ಟಿಯಲ್ಲಿ ಆರ್ ಸಿ ಬಿ ಈಗ ಒಂಬತ್ತನೆಯ ಸ್ಥಾನ.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಂಗಳವಾರ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಸೆಣಸಲಿದೆ. ಸೆಣಸುತ್ತದೆಯೇ ಅಥವಾ ಸೋಲನ್ನು ಒಪ್ಪಿಕೊಂಡು ಬರುತ್ತದೆಯೇ ನೋಡಬೇಕು.
ಆರ್ ಸಿ ಬಿ ಅಭಿಮಾನಿಗಳು ಈ ಪಂದ್ಯಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಇವತ್ತಿನ ಪಂದ್ಯದಲ್ಲಿ ಆರ್ ಸಿ ಬಿ ಗೆಲ್ಲಲಿ. ಆಂಕ ಪಟ್ಟಿಯಲ್ಲಿ ಮೇಲೆರಲಿ ಎಂಬುದು ಅಭಿಮಾನಿಗಳ ಆಸೆ. ಆದರೆ ಅದು ಅಷ್ಟು ಸುಲಭವಲ್ಲ.
ಎರಡು ಸೋಲುಗಳಿಂದ ಕಂಗೆಟ್ಟಿರುವ ಆರ್‌ಸಿಬಿ ಗೆಲುವಿನ ಹಾದಿಗೆ ಮರಳಲು ತವಕಿಸುತ್ತಿದೆ. ಇತ್ತ ಎಲ್ಎಸ್‌ಜಿ ಎರಡು ಪಂದ್ಯಗಳಲ್ಲಿ ಆಡಿದ್ದು, ಒಂದರಲ್ಲಿ ಗೆಲುವು ಕಂಡಿದೆ. ಇದೀಗ ತಮ್ಮ ಮೂರನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಅಂಕಪಟ್ಟಿಯಲ್ಲಿ ಮೇಲಕ್ಕೇರಲು ಪ್ರಯತ್ನ ನಡೆ಼ಸುವುದು ಸಹಜ.
ಆರ್ ಸಿ ಬಿ ನಾಯಕ ಫಾಫ್ ಡು ಪ್ಲೆಸಿಸ್ ಅವರು ಲಕ್ನೋ ವಿರುದ್ಧ ಉತ್ತಮ ದಾಖಲೆ ಹೊಂದಿದ್ದಾರೆ. ಅವರು ಈ ತಂಡದ ವಿರುದ್ಧ 219 ರನ್ ಗಳಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕನ್ನಡಿಗ ಕೆಎಲ್ ರಾಹುಲ್ ಆರ್‌ಸಿಬಿ ಮೇಲೆ ಒಟ್ಟೂ 127 ರನ್ ಗಳಿಸಿ ಆತ್ಮ ವಿಶ್ವಾಸದಲ್ಲಿದ್ದಾರೆ. ವಿರಾಟ್ ಕೊಹ್ಲಿ 117 ರನ್ ಗಳಿಸಿ ಮೂರನೇ ಸ್ಥಾನದಲ್ಲಿದ್ದಾರೆ.
ಜೋಶ್ ಹ್ಯಾಜಲ್‌ವುಡ್ ಒಂಬತ್ತು ವಿಕೆಟ್‌ಗಳೊಂದಿಗೆ ಉಭಯ ತಂಡಗಳ ನಡುವೆ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಭಾರತದ ವೇಗಿ ಮೊಹಮ್ಮದ್ ಸಿರಾಜ್ ಆರು ವಿಕೆಟ್‌ಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದ್ದು, ಹರ್ಷಲ್ ಪಟೇಲ್ ಆರು ವಿಕೆಟ್‌ಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹೀಗಿದೆ.
ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯಶ್ ಪ್ರಭುದೇಸಾಯಿ, ವಿಲ್ ಜ್ಯಾಕ್ಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮೆರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರಣ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.
ಲಕ್ನೋ ಸೂಪರ್ ಜೈಂಟ್ಸ್ ತಂಡ
ಕೆಎಲ್ ರಾಹುಲ್ (ನಾಯಕ), ಕ್ವಿಂಟನ್ ಡಿ ಕಾಕ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೈಲ್ ಮೇಯರ್ಸ್, ಮಾರ್ಕಸ್ ಸ್ಟೋನಿಸ್, ದೀಪಕ್ ಹೂಡಾ, ದೇವದತ್ ಪಡಿಕ್ಕಲ್, ರವಿ ಬಿಷ್ಣೋಯ್, ನವೀನ್-ಉಲ್-ಹಕ್, ಕೃನಾಲ್ ಪಾಂಡ್ಯ, ಯುಧ್ವೀರ್ ಸಿಂಗ್, ಪ್ರೇರಕ್ ಮಂಕದ್ ಯಶ್ ಠಾಕೂರ್, ಅಮಿತ್ ಮಿಶ್ರಾ, ಶಮರ್ ಜೋಸೆಫ್, ಮಯಾಂಕ್ ಯಾದವ್, ಮೊಹ್ಸಿನ್ ಖಾನ್, ಕೆ.ಗೌತಮ್, ಶಿವಂ ಮಾವಿ, ಅರ್ಶಿನ್ ಕುಲಕರ್ಣಿ, ಎಂ.ಸಿದ್ಧಾರ್ಥ್, ಆಷ್ಟನ್ ಟರ್ನರ್, ಮ್ಯಾಟ್ ಹೆನ್ರಿ, ಮೊಹಮ್ಮದ್ ಅರ್ಷದ್ ಖಾನ್.






