ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆ ಐಟಿ ಶಾಕ್ ನೀಡಿದೆ. ಸುಧಾಕರ್ ಆಪ್ತ ಮಾದಾವರ ಗೋವಿಂದಪ್ಪ ನಿವಾಸದ ಮೇಲೆ ಐಟಿ ದಾಳಿ ನಡೆಸಿದೆ.

ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರೂ ಆಗಿರುವ ಗೋವಿಂದಪ್ಪನವರ ನೆಲಮಂಗಲದ ಮನೆಯಲ್ಲಿ ಹಣ ಇದೆ ಎಂದು ಮಾಹಿತಿ ತಿಳಿಯುತ್ತಿದ್ದಂತೆಯೇ ಐಟಿ ಅಧಿಕಾರಿಗಳು ಇಂದು ದಾಳಿ ಮಾಡಿದ್ದಾರೆ. 10 ಮಂದಿ ಐಟಿ ಅಧಿಕಾರಿಗಳ ತಂಡ ಮನೆಯ ಇಂಚಿಂಚು ಪರಿಶೀಲನೆ ನಡೆಸಿದ್ದು ಕೋಟ್ಯಾಂತರ ರೂಪಾಯಿ ನಗದು ಪತ್ತೆಯಾಗಿದೆ.

ದಾಳಿ ವೇಳೆ ಕೋಟ್ಯಾಂತರ ರೂಪಾಯಿ ನಗದು ಹಣ ಹಾಗೂ ಚಿನ್ನಾಭರಣೆ ಪತ್ತೆಯಾಗಿದೆ. ನೋಟು ಎಣಿಕೆ ವೇಳೆ ಮನೆಯಲ್ಲಿ ದಾಖಲೆ ಇಲ್ಲದೆ ಬರೋಬ್ಬರಿ 4 ಕೋಟಿ 80 ಲಕ್ಷ ರೂ. ಹಣವನ್ನು ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಗೋವಿಂದಪ್ಪ ನಿವಾಸಕ್ಕೆ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ದೌಡಾಯಿಸಿ ಮಾಹಿತಿ ಪಡೆದುಕೊಂಡರು. ಅಲ್ಲದೆ ಭದ್ರತೆಯನ್ನು ಹೆಚ್ಚಿಸಿದ್ದಾರೆ.

Author

Leave a Reply

Your email address will not be published. Required fields are marked *