ಕಾಂಗ್ರೆಸ್​​​ ನಾಯಕರ ವಿರುದ್ಧ ಈಶ್ವರಪ್ಪ ಕಿಡಿ

ಶಿವಮೊಗ್ಗ: ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರು ಹಿಂದು ಧರ್ಮಕ್ಕೆ ಅಪಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಪರಿಷತ್ ವಿಕ್ಷಪ ನಾಯಕ ಕೆ.ಎಸ್.ಈಶ್ವರಪ್ಪ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನೂತನ ರಾಘವೇಂದ್ರ ಸ್ವಾಮಿ ಮಠ ನಿರ್ಮಾಣದ ಗುದ್ದಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಈಶ್ವರಪ್ಪ, ಮುಸಲ್ಮಾನರ ಬಗ್ಗೆ ನಮಗೆ ದ್ವೇಷವಿಲ್ಲ. ಮೊನ್ನೆ ಈದ್ ಮಿಲಾದ್ ವೇಳೆ ಪ್ರತಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು. ಆದರೆ ಹುಣಸೂರಿನಲ್ಲಿ ಹಿಂದುಗಳ ಮೆರವಣಿಗೆಗೆ ಕೆಲ ರಸ್ತೆಗಳಲ್ಲಿ ನಿರ್ಬಂಧ ಹೇರಲಾಗಿತ್ತು.

ಕೆಲ ರಸ್ತೆಗಳಲ್ಲಿ ಹಿಂದುಗಳಿಗೆ ನಿರ್ಬಂದ ಹೇರುತ್ತಾರೆ ಎಂದರೆ ಆ ರಸ್ತೆ ಏನು ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನೆ ಮಾಡಿದರು. ಹಿಂದುಗಳಿಗೆ ಅಪಮಾನ ಮಾಡಿದ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದರು. ಅಭಿವೃದ್ದಿ ಕಾರ್ಯದ ಆಧಾರದ ಮೇಲೆ ಚುನಾವಣೆಗೆ ಹೋಗಬೇಕು. ಅದನ್ನು ಬಿಟ್ಟು ಒಂದು ಕೋಮನ್ನು ಓಲೈಸಿ ಚುನಾವಣೆಗೆ ಕಾಂಗ್ರೆಸಿಗರು ಹೋದರೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ಬಗ್ಗೆ ನಮ್ಮ ಬಳಿ ಸಂಪೂರ್ಣ ಮಾಹಿತಿ ಇದೆ ಎನ್ನುತ್ತಿದ್ದಾರೆ. ಹಾಗಿದ್ದರೆ ಕೂಡಲೇ ಅದನ್ನು ಬಿಡುಗಡೆಗೊಳಿಸಬೇಕು. ಗೌರಿ ಲಂಕೇಶ್ ಹತ್ಯೆಯನ್ನು ಚುನಾವಣಾ ದಾಳವಾಗಿ ಬಳಸಲು ಮುಖ್ಯಮಂತ್ರಿ ಯತ್ನಿಸುತ್ತಿದ್ದಾರೆ. ಹಿಂದು ಮತ್ತು ಮುಸ್ಲಿಮರನ್ನು ದ್ವೇಷದಲ್ಲಿಟ್ಟು ಮುಖ್ಯಮಂತ್ರಿಯಾಗುವ ಕನಸನ್ನು ಸಿದ್ದರಾಮಯ್ಯ ಕಾಣುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಜನ ಮುಂದಿನ ಚುನಾವಣೆಯಲ್ಲಿ ರಾಜ್ಯದ ಜನ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿಸಲಿದ್ದಾರೆ. ರಾಜ್ಯ ಸರ್ಕಾರ ಅಭಿವೃದ್ದಿ ಮುಂದಿಟ್ಟುಕೊಂಡು ಚುನಾವಣೆಗೆ ಬರಲಿ ಎಂದರು.

ಕಿರಣ್ ಕುಮಾರ್. ಸುದ್ದಿ ಟಿವಿ. ಶಿವಮೊಗ್ಗ.

0

Leave a Reply

Your email address will not be published. Required fields are marked *