ಕನ್ನಡದ ಹಿರಿಯ ಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್​​ಕುಮಾರ್ ಇನ್ನಿಲ್ಲ

ಬೆಂಗಳೂರು: ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್​​ಕುಮಾರ್​ ಇಂದು ಬೆಳಗಿನ ಜಾವ 4.30ರ ವೇಳೆಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಎಂ. ಎಸ್​. ರಾಮಯ್ಯ ಆಸ್ಪತ್ರೆಯಲ್ಲಿ ಕಳೆದ 17 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಪಾರ್ವತಮ್ಮ ರಾಜ್​​ಕುಮಾರ್​ ಅವರ ಪಾರ್ಥಿವ ಶರೀರವನ್ನು ಸದಾಶಿವ ನಗರದಲ್ಲಿರುವ ಅವರ ನಿವಾಸಕ್ಕೆ ತರಲಾಗಿದ್ದು, ಪಾರ್ವತಮ್ಮ ಅವರ ದರ್ಶನಕ್ಕೆ ಗಣ್ಯರು ಆಗಮಿಸುವ ಹಿನ್ನೆಲೆ ಕೇಂದ್ರ ವಿಭಾಗ ಡಿಸಿಪಿ ಡಾ. ಚಂದ್ರಗುಪ್ತ ನೇತೃತ್ವದಲ್ಲಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇನ್ನು ಪಾರ್ವತಮ್ಮ ರಾಜ್​ಕುಮಾರ್​ ಅವರ ಅಂತ್ಯಸಂಸ್ಕಾರದ ಅಂತಿಮ ವಿಧಿವಿಧಾನಗಳನ್ನು ಅವರ ಹಿರಿಯ ಪುತ್ರ ಶಿವರಾಜ್​ಕುಮಾರ್ ನೆರವೇರಿಸಲಿದ್ದು, ಕಂಠೀರವ ಸ್ಟುಡಿಯೋದಲ್ಲಿರುವ ರಾಜ್​ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನೆರೆವೇರಲಿದೆ. ಪಾರ್ವತಮ್ಮ ರಾಜ್​ಕುಮಾರ್​ ತಮ್ಮ ಪತಿಯ ಆಶಯದಂತೆ ನಾರಾಯಣ ನೇತ್ರಾಲಯಕ್ಕೆ ನೇತ್ರದಾನ ಮಾಡಿದ್ದಾರೆ.

0

Leave a Reply

Your email address will not be published. Required fields are marked *