ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್  ಘೋಷಿಸಲಾಗಿದೆ.

ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ಮಳೆಯಗುವ ಸಾಧ್ಯತೆ ಇದೆ.

ಮೇ 20ರಂದು ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ಕೊಡಗು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Author

Leave a Reply

Your email address will not be published. Required fields are marked *