ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಕೊಪ್ಪಳ ಬಂದ್​

ಕೊಪ್ಪಳ: ವಿಜಯಪುರದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ ಖಂಡಿಸಿ ಇಂದು ಕೊಪ್ಪಳ ಜಿಲ್ಲೆ ಗಂಗಾವತಿ ಸ್ವಯಂಪ್ರೇರಿತ ಬಂದ್ ಗೆ ಕರೆ ನೀಡಲಾಗಿದೆ. ದಲಿತ ಹಾಗೂ ಕನ್ನಡ ಪರ ಸಂಘಟನೆಗಳಿಂದ ಗಂಗಾವತಿ ಸ್ವಯಂ ಪ್ರೇರಿತ ಬಂದ್​ಗೆ ಕರೆ ನೀಡಿದ್ದು, ಸಂವಿಧಾನ ವಿರೋಧಿ ಹೇಳಿಕೆ ನೀಡಿರೋ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ, ಕೋರೆಗಾಂವ್​ನ ವಿಜಯೋತ್ಸವದ ವೇಳೆ‌ ನಡೆದ ಗಲಭೆ ಖಂಡಿಸಿ ಬಂದ್​ಗೆ ಕರೆ ನೀಡಲಾಗಿದೆ. ಇನ್ನು ವಿವಿಧ ಸಂಘಟನೆಗಳಿಂದ ಬಂದ್​ಗೆ ಬೆಂಬಲ ವ್ಯಕ್ತವಾಗಿದ್ದು, ಬೆಳಿಗ್ಗೆಯಿಂದಲೇ ಸಂಘಟನೆಗಳ ಕಾರ್ಯಕರ್ತರು ಅಂಗಡಿ ಮುಂಗಟ್ಟು ಬಂದ್ ಮಾಡಿಸ್ತಿದ್ದಾರೆ. ಜೊತೆಗೆ ಗಂಗಾವತಿ ಸ್ವಯಂಪ್ರೇರಿತ ಬಂದ್​ಗೆ ಕರೆ ನೀಡಲಾಗಿದೆ ಆದರೆ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುವಂತಿಲ್ಲ ಅಂತ ಎಸ್ಪಿ ಡಾ.ಅನೂಪ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

0

Leave a Reply

Your email address will not be published. Required fields are marked *