ಕಾಂಗ್ರೆಸ್ ಗೆ ಕರಡಿ ಸಂಗಣ್ಣ ; ಕೊಪ್ಪಳ ಭಾಗದಲ್ಲಿ ಕಾಂಗ್ರೆಸ್ ಗೆ ಶಕ್ತಿ.. ದಾಸರಹಳ್ಳಿ ಕೃಷ್ಣಮೂರ್ತಿ ಕಾಂಗ್ರೆಸ್ ಗೆ

MP Sanganna karadi; ಇಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಅವರು ಕಾಂಗ್ರೆಸ್ ಸೇರ್ಪಡೆಯಾದರು.

ಬೆಂಗಳೂರು : ಕೊಪ್ಪಳ ಬಿಜೆಪಿ ಸಂಸದ ಕರಡಿ ಸಂಗಣ್ಣ ಇಂದು ಕಾಂಗ್ರೆಸ್ ಪಕ್ಷವನ್ನು ಸೇರಿದರು. ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಸೇರುವ ಬಗ್ಗೆ ತಮ್ಮ ಬೆಂಬಲಿಗರು ಮತ್ತು ಆಪ್ತರ ಜೊತೆ ಸಮಾಲೋಚನೆ ನಡೆಸುತ್ತಿದ್ದರು.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡದಿರುವುದು ಅವರಿಗೆ ಬೇಸರವನ್ನು ಉಂಟು ಮಾಡಿತ್ತು, ಈ ನಡುವೆ ಅವರ ಆಪ್ತರಲ್ಲಿ ಒಬ್ಬರಾದ ಶಾಸಕ ಲಕ್ಷ್ಮಣ ಸವದಿ ಕೂಡ ಅವರ ಜೊತೆ ಸಮಾಲೋಚನೆ ನಡೆಸಿದ್ದರು. ಅಂತಿಮವಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಭೇಟಿಗೂ ಅವರು ಸಮಯ ನಿಗದಿ ಮಾಡಿಕೊಟ್ಟಿದ್ದರು.

ಇಂದು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಅವರು ಕಾಂಗ್ರೆಸ್ ಸೇರ್ಪಡೆಯಾದರು.

ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐ ಎ ಎಸ್ ಅಧಿಕಾರಿ ಪುಟ್ಟಸ್ವಾಮಿ ಅವರು ಕಾಂಗ್ರೆಸ್ ಸೇರ್ಪಡೆಯಾದರು.

Author

Leave a Reply

Your email address will not be published. Required fields are marked *