Kumar Bangarappa | ಬಿಜೆಪಿಯ ರಾಜ್ಯಾಧ್ಯಕ್ಷರಾಗ್ತಾರಾ ಮಾಜಿ ಸಚಿವ ಕುಮಾರ್ ಬಂಗಾರಪ್ಪ..?

Kumar Bangarappa ಬಿಜೆಪಿ ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ.

Kumar Bangarappa : ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ. ನಾನು ಸಹ ಬಿಹೆಪಿ ರಾಜ್ಯಾಧ್ಯಕ್ಷರ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪಅವರು ಅಭಿಪ್ರಾಯಪಟ್ಟಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿಯ ಭಿನ್ನಮತ ಕೇಂದ್ರದ ವರಿಷ್ಠರು ಗಮನ ಹರಿಸಿದ್ದಾರೆ. ಶೀಘ್ರವಾಗಿ ತೀಕ್ಷ್ಣವಾದ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.   

ಬಿಜೆಪಿ ರಾಷ್ಟ್ರಾಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾಗಿದ್ದರಿಂದ ಬಿಜೆಪಿ ರಾಷ್ಟ್ರಾಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರ ಸ್ಥಾನ ಖಾಲಿಯಾಗುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಕಳೆದ 30 ವರ್ಷದಿಂದ ರಾಜಕಾರಣದಲ್ಲಿ ಇದ್ದೇನೆ. ಕಾಂಗ್ರೆಸ್ ನ ಅಹಿಂದ ಸಂಘಟನೆಯಿದ್ದು ಅದಕ್ಕೆ ವಿರುದ್ಧವಾಗಿ ಹಾಗೂ ಬಿಜೆಪಿ ಒಬಿಸಿ ಸಂಘಟನೆಯನ್ನ ಹೆಚ್ಚು ಒತ್ತು ನೀಡುವ ಸಲುವಾಗಿ ಒಬಿಸಿ ನಾಯಕರಿಗೆ ಹೆಚ್ಚು ಒತ್ತು ನೀಡಬೇಅಗಿದೆ. ಒಬಿಸಿ ಸಮುದಾಯಕ್ಕೆ ರಾಜ್ಯಾಧ್ಯಕ್ಷ ಸ್ಥಾನ ನೀಡುವ ವಿಚಾರ ಬಂದರೆ ನನ್ನನ್ನು ಪರಿಗಣಿಸಿ ಎಂದಿದ್ದೇನೆ ಎಂದು ಮಾಹಿತಿ ನೀಡಿದರು.

ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗಬಹುದು ಎಂಬ ನಿರೀಕ್ಷೆ ಇದೆ. ಏನು ಆಗಲಿದೆ ಕಾದು ನೋಡಬೇಕಿದೆ ಎಂದರು.

Author

error: