ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿ ಠಾಣೆಯಲ್ಲೇ ಸಾವು

ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿ ಠಾಣೆಯಲ್ಲೇ ಸಾವಿಗೀಡಾದ ಘಟನೆ ಮಂಡ್ಯ ನಗರದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕಳ್ಳತನದ ಆರೋಪದ ಮೇಲೆ ಬಂಧಿಸಿದ್ದ ಮದ್ದೂರು ತಾಲೂಕಿನ ಬೆಳ್ತೂರು ಗ್ರಾಮದ ಮೂರ್ತಿ ಎಂಬ ವ್ಯಕ್ತಿ ಸಾವಿಗೀಡಾಗಿದ್ದಾನೆ. ಪೊಲೀಸರು ಮೂರು ದಿನದ ಹಿಂದೆ ಆತನನನ್ನು ಕರೆತಂದು ಲಾಕಪ್ ನಲ್ಲಿ ಹಾಕಿದ್ದಾರೆ. ಈ ಬಗ್ಗೆ ಮನೆಯವರಿಗೆ ಯಾರಿಗೂ ವಿಷಯ ತಿಳಿಸಿಲ್ಲ. ಹಾಗೆ ಮೂರು ದಿನದಿಂದ ಅನ್ನ ನೀರು ನೀಡದೇ ಅವನ ಸಾವಿಗೆ ಕಾರಣರಾಗಿದ್ದಾರೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ಆದ್ರೆ ಪೊಲೀಸರು ಮಾತ್ರ ಅವನೇ ಠಾಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿಸಿದ್ದಾರೆ. ಇನ್ನು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0

Leave a Reply

Your email address will not be published. Required fields are marked *