ಜಾತಿ ಮತ ಧರ್ಮ ಏನೇ ಇರಲಿ ನಾವು ಭಾರತೀಯರು -ಮತದಾನ ನಮ್ಮ ಹಕ್ಕು

Lok Sabha Election 2024 : 543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ನವದೆಹಲಿ : ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ತಮಿಳುನಾಡಿನ ಎಲ್ಲಾ 39 ಸ್ಥಾನಗಳು, ಉತ್ತರಾಖಂಡದ ಎಲ್ಲಾ ಐದು ಸ್ಥಾನಗಳು, ಅರುಣಾಚಲ ಪ್ರದೇಶ, ಮಣಿಪುರ ಮತ್ತು ಮೇಘಾಲಯದ ಎರಡೂ ಸ್ಥಾನಗಳು ಮತ್ತು ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂನ ತಲಾ ಒಂದು ಸ್ಥಾನಗಳಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುತ್ತಿದೆ.

543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಜೂನ್ 1 ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

Author

error: