ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕರ್ನಾಟಕದಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಿ: ಪ್ರಧಾನಿ ಮೋದಿ ಸೂಚನೆ
ನವದೆಹಲಿ : ಹತ್ತು ವರ್ಷಗಳಲ್ಲಿ ನಾವು ಮಾಡಿರುವ ಸಾಧನೆ. ಅದನ್ನು ಜನರಿಗೆ ತಿಳಿಸಿ. ಆ ಮೂಲಕ ಚುನಾವಣೆಯನ್ನು ಗೆಲ್ಲಲು ಅಡಿಪಾಯ ಹಾಕಿ ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಹಾಗೆ ಕರ್ನಾಟಕದ ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಕರ್ನಾಟಕದ ಬೂತ್ ಕಾರ್ಯಕರ್ತರ ಜೊತೆ ನಮೋ ಯಾಪ್ ಮೂಲಕ ಮಾತನಾಡಿದ ಪ್ರಧಾನಿ, ಕರ್ನಾಟಕದ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಮನದಟ್ಟು ಮಾಡಿಕೊಡುವಂತೆ ಸೂಚನೆ ನೋಡಿದರು.
ಬೂತ ಮಟ್ಟದಲ್ಲಿ ಹೇಗೆ ಕೆಲಸ ಮಾಡಬೇಕು ಎಂಬುದನ್ನು ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ ಮೋದಿ ಪ್ರತಿ ಭೂತಿನಲ್ಲೂ ಎರಡು ಮೂರು ಜನರ ಗುಂಪು ರಚಿಸಿಕೊಳ್ಳಿ. ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ. ಮಹಿಳೆಯರಿಗಾಗಿ ಸರ್ಕಾರ ಏನು ಮಾಡಿದೆ ಎಂಬುದನ್ನು ತಿಳಿ ಹೇಳಿ ಎಂದರು.
ಕರ್ನಾಟಕ ಸರ್ಕಾರದ ಗ್ಯಾರಂಟಿಗಳ ಕುರಿತು ಟೀಕಿಸಿದ ಅವರು ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ವಿಫಲವಾಗಿದ್ದನ್ನು ಜನರಿಗೆ ತಿಳಿಸಿ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರವನ್ನು ಜನರಿಗೆ ಮನದಟ್ಟು ಮಾಡಿಕೊಡಿ ಎಂದು ಅವರು ಸೂಚಿಸಿದರು.
