ನವ ಭಾರತದಲ್ಲಿ ಭಿನ್ನ ಧ್ವನಿಗೆ ಅವಕಾಶ ಇಲ್ಲ; ಪ್ರಿಯಾಂಕಾ ಗಾಂಧಿ

Priyanka Gandhi : ಮೋದಿ ಅವರ ನವ ಭಾರತದಲ್ಲಿ ಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವೇ ಇಲ್ಲ ಎಂದು ಪ್ರಿಯಾಂಕಾ ಹೇಳಿದರು.

ನವದೆಹಲಿ : ಈ ನವ ಭಾರತದಲ್ಲಿ ಭಿನ್ನಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೃಷಿ ಕಾನೂನು ಮತ್ತು ಸಂವಿಧಾನದ 370ನೆಯ ರದ್ದತಿಯ ವಿಚಾರವನ್ನು ಉದಾಹರಣೆಯಾಗಿ ನೀಡಿದರು.

ಮೋದಿ ಅವರ ನವ ಭಾರತದಲ್ಲಿ ಭಿನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವೇ ಇಲ್ಲ ಎಂದು ಪ್ರಿಯಾಂಕಾ ಹೇಳಿದರು.

ಈ ನಡುವೆ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ರಾಜಕೀಯ ಪಕ್ಷಗಳು ತಮ್ಮ ಪ್ರಚಾರದ ವೇಗವನ್ನು ಹೆಚ್ಚಿಸಿವೆ. ಹಾಗೆ ಪರಸ್ಪರ ವಾಗ್ದಾಳಿಯೂ ಮುಂದುವರಿದಿದೆ.

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕವೂ ಸೇರಿದಂತೆ ದೇಶದ ಹಲವೆಡೆ ಪ್ರಚಾರ ಭಾಷಣ ಮಾಡಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೂ ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ ಅವರು ಪ್ರಚಾರ ನಡೆಸುತ್ತಿದ್ದಾರೆ.

Author

error: