ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಚಿತ್ರನಟ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಇಂದು ಪ್ರಚಾರಕ್ಕೆ ಧುಮುಕಿದರು.
ಸಂಸದೆ ಸುಮಲತಾ ಅವರು ಬಿಜೆಪಿಗೆ ಸೇರಿದ್ದಾರೆ. ಎನ್ ಡಿಎ ಅಭ್ಯರ್ಥಿ ಅವರ ಅಭ್ಯರ್ಥಿ. ಆದರೆ ಸುಮಲತಾ ಅವರನ್ನು ಅಮ್ಮ ಎಂದೇ ಕರೆಯುವ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರಕ್ಕೆ ಇಳಿದಿರುವುದು ಆಶ್ಚರ್ಯಕ್ಕೆ ಕಾರಣವಾಗಿತ್ತು.
ಈ ಕುರಿತು ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ವಿವರಣೆಯನ್ನು ನೀಡಿದರು. ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ನಾನು ಪ್ರಚಾರ ಮಾಡುವುದು ವ್ಯಕ್ತಿಗಳ ಪರವಾಗಿ ಮಾತ್ರ ಎಂದು ಅವರು ಹೇಳಿದರು.
ಕಳೆದ ಐದು ವರ್ಷಗಳ ಹಿಂದೆ ನರೇಂದ್ರಣ್ಣ (ಶಾಸಕ ನರೇಂದ್ರಸ್ವಾಮಿ) ನಮಗೆ ಸಹಾಯ ಮಾಡಿದ್ದರು. ಅವರಿಗೆ ಈಗ ಸಹಾಯ ಮಾಡುವುದು ನಮ್ಮ ಕರ್ತವ್ಯ ಎಂದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರಿಗೆ ಮಳವಳ್ಳಿ ಕ್ಷೇತ್ರದಿಂದ ಅತಿ ಹೆಚ್ಚಿನ ಮತ ಬಂದಿತ್ತು.
ಅಮ್ಮನಿಗೆ ಟಿಕೆಟ್ ಸಿಗದಿದ್ದರೆ ನಮ್ಮ ಅಭ್ಯರ್ಥಿಗೆ ಬೆಂಬಲಿಸಿ ಎಂದು ಅವರು ಕೇಳಿಕೊಂಡಿದ್ದರು. ನಾನು ಅದಕ್ಕೆ ಒಪ್ಪಿಗೆ ನೀಡಿದ್ದೆ. ಈಗ ಈ ಮಾತಿನಂತೆ ಇಲ್ಲಿಗೆ ಬಂದು ಪ್ರಚಾರ ಮಾಡುತ್ತಿದ್ದೇನೆ ಎಂದು ದರ್ಶನ್ ಹೇಳಿದರು.







