ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉತ್ತರ ಪ್ರದೇಶದ ಅಮೇಥಿಯಿಂದಲೂ ಲೋಕಸಭೆಗೆ ಸ್ಪರ್ಧಿಸುತ್ತಾರೆಯೆ ?

Rahul Gandhi In Amethi : ಈಗಿನ ವದಂತಿಗಳ ಪ್ರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಮೇಥಿಯಿಂದಲೂ ಸ್ಪರ್ಧಿಸುವ ಸಾಧ್ಯತೆ ಇದೆ.

ನವದೆಹಲಿ : ಈ ಪ್ರಶ್ನೆಗೆ ಉತ್ತರ ಇನ್ನೂ ನಿಗೂಢ. ಇವತ್ತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಜೊತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಪ್ರಶ್ನೆಗೆ ನೇರ ಉತ್ತರ ನೀಡಲಿಲ್ಲ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಮತ್ತು ಕೇಂದ್ರ ಚುನಾವಣಾ ಸಮಿತಿ ಈ ಬಗ್ಗೆ ತೀರ್ಮನ ಕೈಗೊಳ್ಳುತ್ತದೆ ಎಂಬುದು ಈ ಕುರಿತ ಪ್ರಶ್ನೆಗೆ ರಾಹುಲ್ ಗಾಂಧಿ ನೀಡಿದ ಉತ್ತರವಾಗಿತ್ತು.

ಈಗಿನ ವದಂತಿಗಳ ಪ್ರಕಾರ ರಾಹುಲ್ ಗಾಂಧಿ ಅವರು ಅಮೇಥಿಯಿಂದಲೂ ಸ್ಪರ್ಧಿಸುವ ಸಾಧ್ಯತೆ ಇದೆ. ಯಾಕೆಂದರೆ ಇದರಿಂದ ಉತ್ತರ ಪ್ರದೇಶದ ಉಳಿದ ಕ್ಷೇತ್ರಗಳಲ್ಲೂ ಪೂರಕ ವಾತಾವರಣ ನಿರ್ಮಾಣವಾಗಬಹುದು. ಜೊತೆಗೆ ಅಮೇಥಿ ನೆಹರೂ ಕುಟುಂಬದ ಭದ್ರ ಕೋಟೆಯಾಗಿತ್ತು.

ಅಖಿಲೇಶ್ ಯಾದವ ಜೊತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ರಾಹುಲ್ ಇಂಡಿಯಾ ಒಕ್ಕೂಟದ ಪರವಾಗಿ ಬಲವಾದ ಅಂಡರ್ ಕರೆಂಟ್ ಇದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಬಿಜೆಪಿಯ ಪರಿಸ್ಥಿತಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಈ ಬಾರಿ ಬಿಜೆಪಿ 150 ಸ್ಥಾನಗಳನ್ನು ಮಾತ್ರ ಗೆಲ್ಲಬಹುದು ಎಂದು ಅವರು ಹೇಳಿದರು.

Author

error: