ಸತ್ಯ ಸುಳ್ಳಿನ ಸಂಘರ್ಷ, ನಮ್ಮದು ಸತ್ಯದ ಪ್ರಚಾರ, ಬಿಜೆಪಿಯದು ಸುಳ್ಳಿನ ಪ್ರಚಾರ : ಸಿದ್ದರಾಮಯ್ಯ

ಕೋಲಾರ: ಇಂದು ಕುರುಡುಮಲೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ತನ್ನ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸತ್ಯ ಮತ್ತು ಸುಳ್ಳಿನ ನಡುವಿನ ಸಂಘರ್ಷ ಎಂದು ಕರೆದಿದ್ದಾರೆ. ನಮ್ಮ ಪ್ರಚಾರ ಸತ್ಯಡಾ ಪ್ರಚಾರ, ಬಿಜೆಪಿಯದು ಸುಳ್ಳಿನ ಪ್ರಚಾರ ಎಂದು ಅವರು ಟೀಕಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣಾ ಪ್ರಚಾರ ಕಾರ್ಯ ಈಗಾಗಲೇ ಆರಂಭವಾಗಿದೆ ಆದರೆ ಇಂದು ಕುರುಡುಮಲೆ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮುಳುಬಾಗಿಲಿನಿಂದನಿಂದ ಅಧಿಕೃತವಾಗಿ ಆರಂಭವಾಗಲಿದೆ ಎಂದು ಹೇಳಿದರು.

ನಾನು ಈಗಾಗಲೇ ಕೆಲ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಿರುವುದನ್ನು ಜನ ನೋಡಿದ್ದಾರೆ. ಚಾಮರಾಜನಗರ, ಮೈಸೂರು-ಕೊಡಗು ಮತ್ತು ಚಿತ್ರದುರ್ಗ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದೇನೆ. ಬಿಜೆಪಿ ನಾಯಕರು ಸುಳ್ಳಿನ ಮೇಲೆ ಪ್ರಚಾರ ಮಾಡುತ್ತಾರೆ ಅದರೆ ಕಾಂಗ್ರೆಸ್ ಸತ್ಯದ ಮೇಲೆ ಪ್ರಚಾರ ಮಾಡಲಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, 1999ರಲ್ಲಿ ಎಸ್.ಎಂ.ಕೃಷ್ಣ ಕುರುಡುಮಲೆಯಿಂದ ಪಾಂಚಜನ್ಯ ಯಾತ್ರೆ ಆರಂಭಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದರು. ಈಗ ಅದೇ ರೀತಿ ನಾನು ಪಾಂಚಜನ್ಯ ಮೊಳಗಿಸಲಿದ್ದೇನೆ ಎಂದು ಅವರು ಹೇಳಿದರು.

Author

error: