ಮೀಟೂ ಅಭಿಯಾನದ ಉರುಳು: ರಾಜಿನಾಮೆ ನೀಡಿದ ಕೇಂದ್ರ ಸಚಿವ ಅಕ್ಬರ್

ದೆಹಲಿ: ವಿದೇಶಾಂಗ ಖಾತೆ ರಾಜ್ಯ ಸಚಿವ ಎಂ. ಜೆ. ಅಕ್ಬರ್ ತಮ್ಮ ಹುದ್ದೆಗೆ ರಾಜಿನಾಮೆ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಹೊರಿಸಿರುವ ಪ್ರಿಯಾ ರಮಣಿ ವಿರುದ್ಧ ದೆಹಲಿಯ ಪಟಿಯಾಲ ಹೌಸ್ ಕೋರ್ಟ್​​ನಲ್ಲಿ ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದದರು. ತಮ್ಮ ವಿರುದ್ಧದ ಆರೋಪವನ್ನು ನಿರಾಕರಿಸಿದ್ದ ಅವರು, ಸೆಕ್ಷನ್ 499 ಮತ್ತು 500ರ ಅಡಿಯಲ್ಲಿ ಪ್ರಿಯಾ ರಮಣಿ ವಿರುದ್ಧ ದೂರು ದಾಖಲಿಸಿದ್ದರು. ಅರ್ಜಿಯ ವಿಚಾರಣೆ ಅಕ್ಟೋಬರ್ 18ರಂದು ನಡೆಯಬೇಕಿದೆ. ದೇಶದಲ್ಲಿ ಮೀಟೂ ಅಭಿಯಾನ ಆರಂಭವಾದ ನಂತರ ಅಕ್ಬರ್ ಅವರು 1990ರಲ್ಲಿ ಕಿರುಕುಳ ನೀಡಿದ್ದರು ಎಂದು ಅನೇಕ ಪತ್ರಕರ್ತೆಯರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅವರ ರಾಜಿನಾಮೆಗೆ ವಿಪಕ್ಷ ಕಾಂಗ್ರೆಸ್ ಸೇರಿದಂತೆ ಮಹಿಳಾ ಹೋರಾಟಗಾರರು ಆಗ್ರಹಿಸಿದ್ದರು. ಆದರೆ, ರಾಜಿನಾಮೆ ಪಡೆಯುವ ವಿಷಯದಲ್ಲಿ ಬಿಜೆಪಿ ಯಾವುದೇ ನಿರ್ಧಾರ ಕೈಗೊಂಡಿರಲಿಲ್ಲ. ಆದರೆ, ಇಂದು ಇದ್ದಕ್ಕಿದ್ದಂತೆ ಅವರು ರಾಜಿನಾಮೆ ನೀಡಿದ್ದಾರೆ.

0

Leave a Reply

Your email address will not be published. Required fields are marked *