ಅರವಿಂದ್ ಕೇಜ್ರಿವಾಲ್​ರನ್ನು ಭೇಟಿಯಾದ ಪ್ರಕಾಶ್ ರೈ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿರುವ ಬಹುಭಾಷಾ ನಟ, ಕನ್ನಡಿಗ ಪ್ರಕಾಶ್ ರೈ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಭೇಟಿಯಾದ ಫೋಟೋವನ್ನು ಸಾಮಾಜಿಕ ಜಾಲತಾಣಗಳಾದ ಟ್ವೀಟರ್, ಫೇಸ್​ಬುಕ್​ನಲ್ಲಿ ಹಂಚಿಕೊಂಡಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿಯಾಗಿ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮೂಲಕ ನನ್ನ ರಾಜಕೀಯ ಜೀವನಕ್ಕೆ ಬೆಂಬಲಿಸಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದೆ. ಕೆಲಕಾಲ ಪ್ರಮುಖ ವಿಷಯಗಳ ಕುರಿತು ಚರ್ಚಿಸಿದೆ ಎಂದು ಅವರು ಹೇಳಿದ್ದಾರೆ. #justasking ಹ್ಯಾಷ್​ಟ್ಯಾಗ್​ನಡಿ ಅವರು ಟ್ವೀಟ್ ಮಾಡಿದ್ದಾರೆ.

0

Leave a Reply

Your email address will not be published. Required fields are marked *