ಪಕ್ಷ ಸಂಘಟನೆಗೆ ಶ್ರಮಿಸಲು ಕಾರ್ಯಕರ್ತರಿಗೆ ಸಚಿವ ಈಶ್ವರ ಖಂಡ್ರೆ ಕರೆ

Minister Eshwara Khandre: ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳಿಗೆ ಪಕ್ಷ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಮನೆ ಮನೆಗೆ ತೆರಳಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು

ಶಿವಮೊಗ್ಗ: ಮಲೆನಾಡಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಲು ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕು ಮತ್ತು ಪಕ್ಷದ ಸಂಘಟನೆಗೆ ಶ್ರಮಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದರು.

ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದ ಜನತೆ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿದ್ದು, ಸರ್ಕಾರ ಉತ್ತಮವಾಗಿ ನಡೆಯುತ್ತಿದೆ. ಕೊಟ್ಟ ಮಾತಿನಂತೆ ಎಲ್ಲ ಗ್ಯಾರಂಟಿಗಳನ್ನೂ ಅನುಷ್ಠಾನ ಮಾಡಿದ್ದೇವೆ. ಆದರೆ, ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷಿತ ಫಲಿತಾಂಶ ಬರಲಿಲ್ಲ ಎಂದರು.

ಮುಂಬರುವ ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ ಚುನಾವಣೆಗಳಿಗೆ ಪಕ್ಷ ಮುಖಂಡರು, ಕಾರ್ಯಕರ್ತರು ಸಜ್ಜಾಗಬೇಕು. ಮನೆ ಮನೆಗೆ ತೆರಳಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಶಿವಮೊಗ್ಗ ಜಿಲ್ಲೆಯ ಜನರ ಬಗ್ಗೆ ಕಳಕಳಿ ಹೊಂದಿರುವ ಅರಣ್ಯ ಸಚಿವರು ಇಂದು ಶರಾವತಿ ಸಂತ್ರಸ್ತರಿಗೆ ನ್ಯಾಯ ದೊರಕಿಸಲು ಪ್ರಯತ್ನಿಸುವ ಭರವಸೆ ನೀಡಿದ್ದಾರೆ. ಜೊತೆಗೆ ಅರಣ್ಯವಾಸಿಗಳ ಹಕ್ಕು ರಕ್ಷಣೆಗೂ ಸೂಚನೆ ನೀಡಿದ್ದಾರೆ ಎಂದರು.

ಶಿವಮೊಗ್ಗ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

Author

error: