ಯಾದಗಿರಿ : ಸಂಸದ ಪ್ರಜ್ವಲ್ ರೇವಣ್ಣ ವಿಡಿಯೋ ರೆಕಾರ್ಡ್ ಮಾಡಿಕೊಂಡು ಈಗ ಬೇರೆಯವರ ಮೇಲೆ ಹಾಕುತ್ತಿದ್ದಾರೆ. ಈ ವಿಡಿಯೋ ಬಿಡುಗಡೆ ಮಾಡಿದವರು ಯಾರು? ಎಷ್ಟು ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ದಾರೆ? ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಅವರು ಪ್ರಶ್ನೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಾರು ಮಹಿಳೆಯರ ಜತೆ ನಡೆಸಿದ ವಿಡಿಯೋ ಇದ್ದ ಪೆನ್ಡ್ರೈವ್ ಬಿಡುಗಡೆಯ ಹಿಂದೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಜ್ವಲ್ ರೇವಣ್ಣ ಅವರು ಡಿಕೆ ಶಿವಕುಮಾರ್ ಮಾತು ಕೇಳಿ ವಿಡಿಯೋ ಮಾಡಿಕೊಂಡ್ರಾ? ಅಥವಾ ಡಿಕೆ ಶಿವಕುಮಾರ್ ಏನು ಎಲ್ಲ ಹೆಣ್ಣು ಮಕ್ಕಳ ವಿಡಿಯೋ ಮಾಡಿಕೊ ಅಂತ ಹೇಳಿದ್ರಾ? ಡಿಕೆ ಶಿವಕುಮಾರ್ ಅವರೇ ವಿಡಿಯೋ ಮಾಡಿದ್ರಾ?” ಎಂದು ವ್ಯಂಗ್ಯವಾಡಿದ್ದಾರೆ.
ನೇಹಾ ಹಿರೇಮಠ ಕೊಲೆಯಾದಾಗ ಬಿಜೆಪಿ ಮತ್ತು ಜೆಡಿಎಸ್ನವರು ಆರೋಪಿಯನ್ನು ಎನ್ಕೌಂಟರ್ ಮಾಡಬೇಕು ಎಂದರು. ಈಗ ಬಿಜೆಪಿ, ಜೆಡಿಎಸ್ನವರು ಎಲ್ಲಿದ್ದಾರೆ? ಪ್ರಜ್ವಲ್ನನ್ನು ಎನ್ಕೌಂಟರ್ ಮಾಡಿ ಅಂತ ಯಾಕೆ ಹೇಳುತ್ತಿಲ್ಲ? ಸಾಮಾನ್ಯ ಜನರಿಗೆ ಒಂದು ನ್ಯಾಯ, ದೊಡ್ಡವರಿಗೆ ಒಂದು ನ್ಯಾಯನಾ? ಎಂದು ಖಾರವಾಗಿ ಪ್ರಶ್ನೆ ಮಾಡಿದ್ರು.







