ಕಿರುಕುಳ: ಆತ್ಮಹತ್ಯೆಗೆ ಶರಣಾದ ಯುವತಿ

ಕೌಶಾಂಬಿ: 23 ವರ್ಷದ ಕಾಲೇಜು ವಿದ್ಯಾರ್ಥಿನಿ, ಉತ್ತರಪ್ರದೇಶದ ಕೌಶಾಂಬಿಯಲ್ಲಿ ನೇಣುಬಿಗಿದುಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ತನಗೆ ದುಷ್ಕರ್ಮಿಗಳು ಕಿರುಕುಳ ನೀಡಿದ್ದರು ಎಂದು ಯುವತಿ ಸಂಬಂಧಿಕರೊಂದಿಗೆ ಹೇಳಿಕೊಂಡಿದ್ದಳು. ಈ ಕುರಿತು ಪೊಲೀಸರಿಗೆ ದೂರನ್ನು ಕೂಡ ನೀಡಲಾಗಿತ್ತು. ಆದರೆ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದರು. ಇದೇ ಕಾರಣದಿಂದಾಗಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಉತ್ತರಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ. ವರದಿಗಳ ಪ್ರಕಾರ, ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಾಲೇಜಿಗೆ ತೆರಳುತ್ತಿದ್ದ ವೇಳೆ, ಯುವಕರು ತನ್ನಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ತಮ್ಮ ಸಂಬಂಧಿಕರೊಂದಿಗೆ ಯುವತಿ ಹೇಳಿಕೊಂಡಿದ್ದಳು. ನಂತರ ಸಂಬಂಧಿಕರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಆದರೆ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಪೊಲೀಸರು ವಿಫಲರಾಗಿದ್ದರು.

0

Leave a Reply

Your email address will not be published. Required fields are marked *