Karnataka Monsoon 2024: ರಾಜ್ಯಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ

Karnataka Monsoon 2024 : ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದ್ದು, ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು : ರಾಜ್ಯಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಆಗಮನವಾಗಲಿದೆ. ಈಗಾಗಲೇ ಕೇರಳಕ್ಕೆ ಮುಂಗಾರು ಪ್ರವೇಶಿಸಿದ್ದು, ರಾಜ್ಯದಲ್ಲಿ ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ಸಮಾಧಾನಕರ ಸುದ್ದಿ ಬಂದಿದ್ದು ಈ ಬಾರಿ ಮುಂಗಾರು ಮಳೆ ಉತ್ತಮವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್ 2 ರಿಂದ ರಾಜ್ಯಾದ್ಯಂತ ಮುಂಗಾರು ಆರಂಭವಾಗಲಿದ್ದು, ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಎರಡು ದಿನ ಒಣಹವೆ ಇರಲಿದ್ದು, ಬಳಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Author

error: