MUDA Scam: ಮುಖ್ಯಮಂತ್ರಿಗಳ ವಿರುದ್ಧ ದ್ವೇಷದ ಪ್ರಕರಣವನ್ನು ಕಾನೂನು ಮೂಲಕವೇ ಉತ್ತರ: ಬಿ ಕೆ ಹರಿಪ್ರಸಾದ್‌

MUDA Scam: ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ರಾಜಕೀಯ ದ್ವೇಷದಿಂದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಬಿಜೆಪಿ ರಾಜಭವನವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಜನರಿಂದ ಆಯ್ಕೆಯಾದ ಸರ್ಕಾರಗಳನ್ನು ಹಾಗೂ ಮುಖ್ಯಮಂತ್ರಿಗಳನ್ನು ಅಸ್ಥಿರಗೊಳಿಸುವ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ದ್ವೇಷಕ್ಕೆ ಜನರೇ ಕಳೆದ ಲೋಕಸಭೆಯಲ್ಲಿ ಉತ್ತರ ಕೊಟ್ಟಾಗಿದೆ. ಆದರೂ ಕೂಡ ಬಿಜೆಪಿ ಮತ್ತು ಮೋದಿ ಸರ್ಕಾರ ಬುದ್ಧಿ ಕಲಿಯುವ ಲಕ್ಷಣಗಳಿಲ್ಲ ಎಂದು ಕುಟುಕಿದ್ದಾರೆ.

ಹಿಮಾಚಲಪ್ರದೇಶ, ತೆಲಂಗಾಣದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಯತ್ನ ಆಗ ಯಶಸ್ವಿ ಆಗಿಲ್ಲ, ಈಗ ಕರ್ನಾಟಕದಲ್ಲಿ ಪ್ರಯತ್ನ ಮಾಡ್ತಿದ್ದಾರೆ ಜಾರ್ಖಂಡ್ ಮುಖ್ಯಮಂತ್ರಿಯನ್ನು ಕೂಡ ಇದೇ ರೀತಿ ಬಂಧಿಸಿದ್ರು ತನಿಖಾ ಸಂಸ್ಥೆಗೆ ಕೋರ್ಟ್ ಛೀಮಾರಿ ಹಾಕಿ ಜಾಮೀನು ನೀಡಿತ್ತು

“ದಲಿತ-ಹಿಂದುಳಿದವರ ಹಾಗೂ ಬಡವರ ಪರವಾಗಿ ಕಾರ್ಯಕ್ರಮಗಳನ್ನು ನೀಡುವ ವಿಪಕ್ಷದ ಸರ್ಕಾರಗಳನ್ನು ಅಸ್ಥಿರಗೊಳಿಸುವ ಪ್ರಜಾಪ್ರಭುತ್ವ ವಿರೋಧಿ ನಡೆಯ ವಿರುದ್ಧ ಜನರು ತಕ್ಕ ಉತ್ತರ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲಿನ ದ್ವೇಷದ ಪ್ರಕರಣವನ್ನು ಕಾನೂನು ವ್ಯವಸ್ಥೆಯ ಮೂಲಕವೇ ಉತ್ತರ ನೀಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

Author

error: