ಮೈಸೂರು : ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಜಿ ಟಿ ದೇವೇಗೌಡರು ಅವರು ಸವಾಲು ಹಾಕಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದ ಜಿ ಟಿ ದೆವೇಗೌಡರು ಕಡಿದು ಕಟ್ಟಿಹಾಕಿದ್ದೇನು ಎಂದು ಸಿದ್ದರಾಮಯ್ಯ ಟೀಕಿಸಿದ್ದರು. ಈ ಟೀಕೆಗೆ ಜಿ ಟಿ ದೇವೇಗೌಡ ಇಂದು ಉತ್ತರ ನೀಡಿದರು. .

ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಣಕ್ಕಿಳಿಯೋಣ. ಯಾರು ಗೆಲುತ್ತಾರೆ ನೋಡೋಣ ಬನ್ನಿ ಎಂಬ ಆಹ್ವಾನವನ್ನು ಗೌಡರು ನೀಡಿದರು.

ಅಭಿವೃದ್ಧಿ ಎಂದರೆ ಏನು ಎಂಬುದೇ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲ. ಅಭಿವೃದ್ಧಿ ಮಾಡದೇ ರಾಜಕೀಯದಲ್ಲಿ ಬೆಳೆದಿದ್ದಾರೆ ಎಂದರೆ ಅದು ಸಿದ್ದರಾಮಯ್ಯ ಮಾತ್ರ ಎಂದು ಟೀಕಿಸಿದ ಅವರು ಮುಖ್ಯಮಂತ್ರಿಗಳು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.

Author

Leave a Reply

Your email address will not be published. Required fields are marked *