ಸುದ್ದಿ ಟಿವಿಯ ಪ್ರಮುಖ 10 ಸುದ್ದಿಗಳು

SuddiTv Top 10 News: ರಾಜ್ಯ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಘಟನೆಗಳು, ಮನರಂಜನೆ, ರಾಜಕೀಯ, ಕ್ರೀಡೆ ಮತ್ತಿತರರ ವಿಷಯಗಳ ಕುರಿತು ಸುದ್ದಿಟಿವಿ ವೆಬ್ ಸೈಟ್ ನ ಟಾಪ್‌ 10 ಸುದ್ದಿಗಳು

ರಾಜ್ಯ ದೇಶ, ವಿದೇಶಗಳಲ್ಲಿ ನಡೆದ ಪ್ರಮುಖ ಘಟನೆಗಳು, ಮನರಂಜನೆ, ರಾಜಕೀಯ, ಕ್ರೀಡೆ ಮತ್ತಿತರರ ವಿಷಯಗಳ ಕುರಿತು ಸುದ್ದಿಟಿವಿ ವೆಬ್ ಸೈಟ್ ನ ಟಾಪ್‌ 10 ಸುದ್ದಿಗಳು ಇಲ್ಲಿವೆ.

1. ಬಿಜೆಪಿ ಪಕ್ಷದಲ್ಲಿಯೇ ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಧಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ. ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ.

ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ: CM ಸಿದ್ದರಾಮಯ್ಯ‌ ಆಗ್ರಹ

2. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್‌ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದರು.

ನಿರ್ಮಲಾ ಸೀತಾರಾಮನ್‌ ಪ್ರಕರಣಕ್ಕೂ, ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್‌.ಅಶೋಕ

3. ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರ ಬಗ್ಗೆ ಎರಡು ನಾಲಿಗೆಗಳಲ್ಲಿ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಹಿಂದೆ ಐದು ವರ್ಷ ಅಧಿಕಾರದಲ್ಲಿ ಇದ್ದಾಗ, ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ಅನುಮತಿ ನೀಡದ ವೇಳೆ ರಾಜ್ಯಪಾಲರನ್ನು ವಾಚಾಮಗೋಚರ ಹೊಗಳಿದ್ದ ಸಿದ್ದರಾಮಯ್ಯ, ಅದೇ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಮೇಲೆ ರಾಜ್ಯಪಾಲರನ್ನು ಹೀನಾಮಾನವಾಗಿ ತೆಗಳುತ್ತಿದ್ದಾರೆ. ಅವರ ಪಕ್ಷದ ಶಾಸಕರು, ಸಚಿವರು ಇದನ್ನೇ ಮಾಡುತ್ತಿದ್ದಾರೆ ಎಂದು ದೂರಿದರು.

ರಾಜ್ಯಪಾಲರ ವಿಷಯದಲ್ಲಿ ಸಿದ್ದರಾಮಯ್ಯ ಅವರಿಗೆ ಎರಡು ನಾಲಿಗೆ: HD ಕುಮಾರಸ್ವಾಮಿ ಆಕ್ರೋಶ

4. ಲೋವರ್ ಆಗರಂ ನಿಂದ ಸರ್ಜಾಪುರವರೆಗೂ ರಸ್ತೆ ಆಗಲೀಕರಣಕ್ಕೆ 12.34 ಎಕರೆ ಜಮೀನನ್ನು ರಕ್ಷಣಾ ಇಲಾಖೆ ಬಿಬಿಎಂಪಿಗೆ ನೀಡಿದೆ. ಇನ್ನೂ 10.77 ಎಕರೆ ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದರು. ಎಂ.ಜಿ.ರಸ್ತೆಯಿಂದ ಬೆಳ್ಳಂದೂರು ಭಾಗಕ್ಕೆ ತೆರಳಲು ಸುಮಾರು 1 ಗಂಟೆ ಸಮಯ ಬೇಕಾಗಿತ್ತು. ಈ ರಸ್ತೆ ನಿರ್ಮಾಣವಾದ ನಂತರ 5-8 ನಿಮಿಷಗಳ ಅಂತರದಲ್ಲಿ ಕ್ರಮಿಸಬಹುದು ಎಂದು ಹೇಳಿದರು.

5. ರಾಜಕೀಯ ಪ್ರೇರಿತವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇದಕ್ಕೆ ಯಾವುದೇ ಕಾರಣಕ್ಕೂ ಜಗ್ಗುವ ಮಾತೇ ಇಲ್ಲ. ಕಾನೂನು ಮೂಲಕವೇ ಉತ್ತರ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ದೇಶದಲ್ಲಿ ಬಿಜೆಪಿಯೇತರ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ನಡೆಯುತ್ತಿದ್ದು, ಇದಕ್ಕಾಗಿ ರಾಜಭವನಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

CM ಸಿದ್ದರಾಮಯ್ಯನವರ ವಿರುದ್ಧದ FIRಗೆ ಕಾನೂನು ಮೂಲಕವೇ ಹೋರಾಟ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

6. ಯಾವುದೇ ಕಾರಣಕ್ಕೂ ಬಿಜೆಪಿ ಅಧ್ಯಕ್ಷ ಸ್ಥಾನದದಿಂದ ಬಿ.ವೈ.ವಿಜಯೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ವಿಜಯೇಂದ್ರ ರಾಜಾಧ್ಯಕ್ಷರಾದ ಮೇಲೆ ಹೊಸ ಚೈತನ್ಯ ಬಂದಿದೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆ ಮಾಡುತ್ತಿದ್ದಾರೆ. ಅವರನ್ನು ಅಧ್ಯಕ್ಷ ಸ್ಥಾನದಿಂದ ಹೇಗೆ ಕೆಳಗಿಳಿಸುತ್ತಾರೆ ನಾವು ನೋಡುತ್ತೇವೆ ಎಂದು ಎಚ್ಚರಿಸಿದರು.

ಯಾವುದೇ ಕಾರಣಕ್ಕೂ ವಿಜಯೇಂದ್ರ ಬದಲಾವಣೆ ಇಲ್ಲ: ಯತ್ನಾಳ್ ಬಣಕ್ಕೆ ರೇಣುಕಾಚಾರ್ಯ ತಿರುಗೇಟು

7. ಇತ್ತೀಚೆಗೆ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳಲು ಬದಲಾದ ಆಹಾರ ಪದ್ಧತಿ, ಜೀವನ ಶೈಲಿಯೇ ಮೂಲ ಕಾರಣ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಉತ್ತಮ ಹವ್ಯಾಸಗಳನ್ನ ರೂಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಜನರು ಆರೋಗ್ಯದ ಬಗ್ಗೆ ಹೆಚ್ಚು ಜಾಗೃತಿ ವಹಿಸಬೇಕಾಗಿದೆ. ಹಠಾತ್ ಹೃದಯಘಾತಕ್ಕೆ ಒಳಗಾಗುವರನ್ನ ರಕ್ಷಿಸಲು ಆರೋಗ್ಯ ಇಲಾಖೆ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆ ಮೂಲಕ ಪರಿಣಾಮಕಾರಿ ಚಿಕಿತ್ಸೆ ಒದಗಿಸಲಾಗುತ್ತಿದೆ.

ಬದಲಾದ ಜೀವನ ಶೈಲಿ, ಆಹಾರ ಪದ್ದತಿಗಳೇ ಹೃದಯ ಸಮಸ್ಯೆಗಳಿಗೆ ಮೂಲ ಕಾರಣ: ಸಚಿವ ದಿನೇಶ್ ಗುಂಡೂರಾವ್

8. ಹೊಟ್ಟೆ ತುಂಬ ಹಿಟ್ಟು-ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಾನು ಅನ್ನ ಭಾಗ್ಯ ಜಾರಿಗೆ ತರಲು ಅನ್ನಕ್ಕಾಗಿ ಕಾದು ನಿಂತ ಪರಿಸ್ಥಿತಿಯೇ ಕಾರಣ ಎಂದು ಮುಖ್ಯಮಂತ್ರಿ CM ಸಿದ್ದರಾಮಯ್ಯ ಅವರು ತಮ್ಮ ಬಾಲ್ಯದ ದಿನಗಳನ್ನು ಸ್ಮರಿಸಿದರು.1949 ನವೆಂಬರ್ 25 ರಂದು ಸಂವಿಧಾನ ಜಾರಿ ಸಭೆಯಲ್ಲಿ ಮಾಡಿದ ಭಾಷಣ ನನ್ನ ಗ್ಯಾರಂಟಿಗಳಿಗೆ ಸ್ಫೂರ್ತಿ.‌ ಅವಕಾಶಗಳಿಂದ ವಂಚಿತರಾಗಿರುವವರಿಗೆ ಸಮಾನ ಅವಕಾಶಗಳು ಸಿಕ್ಕಾಗ ಸಮ ಸಮಾಜ ನಿರ್ಮಾಣ ಸಾಧ್ಯ. ಬಸವಾದಿ ಶರಣರು, ಬುದ್ದ ಕೂಡ ಸಮ ಸಮಾಜದ ಬಗ್ಗೆ ಹೇಳಿದ್ದಾರೆ. ಕೇವಲ ಭಾಷಣಳಿಂದ ಸಮ ಸಮಾಜದ ಆಶಯ ಈಡೇರಲ್ಲ. ಈ ಕಾರಣಕ್ಕೇ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ಹಲವು ಭಾಗ್ಯಗಳನ್ನು ಜಾರಿ ಮಾಡಿದೆ.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹೆಚ್ಚೆಚ್ಚು ಮಾತಾಡಬೇಕು: CM ಸಿದ್ದರಾಮಯ್ಯ

9. ಕರ್ನಾಟಕದಲ್ಲಿ 500 ಹೊಸ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜಿಸಿಸಿ-ಗ್ಲೋಬಲ್ ಕೆಪಬಿಲಿಟಿ ಸೆಂಟರ್) ಗಳನ್ನು ಆಕರ್ಷಿಸುವ ಗುರಿಯಿದ್ದು, 3.5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಮತ್ತು ಆರ್ಥಿಕ ಉತ್ಪಾದನೆಯಲ್ಲಿ 50 ಬಿಲಿಯನ್ ಡಾಲರ್ ಗುರಿಯನ್ನು ತಲುಪಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಕರ್ನಾಟಕವು 2030ರ ವೇಳೆಗೆ ವಿಶ್ವದ ಅಗ್ರ ಫೋರ್ಬ್ಸ್ 2000 ಉದ್ಯಮಗಳಲ್ಲಿ ಶೇ.15 (330) ಕ್ಕಿಂತ ಹೆಚ್ಚು ಹೋಸ್ಟ್ ಮಾಡುವ ಗುರಿಯನ್ನು ಹೊಂದಿರುವ ದೇಶದ ಮೊದಲ (ಜಿಸಿಸಿ) ನೀತಿಯನ್ನು ಘೋಷಿಸಿದ್ದೇವೆ, ಇದು ವಿವಿಧ ವಲಯಗಳಲ್ಲಿ ಒಂದು ಮಿಲಿಯನ್ ಉದ್ಯೋಗಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ.

GCC Policy Release: 2029ರ ವೇಳೆಗೆ 50 ಬಿಲಿಯನ್ ಡಾಲರ್ ಆರ್ಥಿಕ ಉತ್ಪಾದನೆ ಮತ್ತು 500 ಹೊಸ GCC ಆಕರ್ಷಣೆ: ಪ್ರಿಯಾಂಕ್ ಖರ್ಗೆ

10. ಟೀಮ್ ಇಂಡಿಯಾ ಟಿ20 ವಿಶ್ವಕಪ್‍ನಲ್ಲಿ ಗೆಲುವುಗಳನ್ನು ದಾಖಲಿಸಿ ಅಜೇಯ ಸಾಧನೆ ಮಾಡಿದೆ. ರೋಹಿತ್ ತಂಡದ ಯಶಸ್ಸಿನ ಹಿಂದೆ ಕನ್ನಡಿಗನೊಬ್ಬನಿದ್ದಾನೆ. ಈ ಬಾರಿಯ ವಿಶ್ವಕಪ್‍ನಲ್ಲಿ ಟೀಮ್ ಇಂಡಿಯಾದ್ದು ಅಜೇಯ ಸಾಧನೆ. ಈ ಯಶಸ್ಸಿಗೆ ಕಾರಣ ಟೀಮ್ ಇಂಡಿಯಾ ಆಟಗಾರರು ಎನ್ನುವುದು ನಿಜ. ಆದರೆ ತೆರೆಯ ಹಿಂದೆ ನಿಂತು ತಂಡದ ಯಶಸ್ಸಿಗೆ ಕಾರಣರಾದವರು ಬೇರೆಯೇ ಇದ್ದಾರೆ. ಅವರಲ್ಲೊಬ್ಬ, ನಮ್ಮ ಕನ್ನಡಿಗ, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹುಡುಗ ರಾಘವೇಂದ್ರ ದೀವಗಿ. ಟೀಮ್ ಇಂಡಿಯಾದ ಥ್ರೋಡೌನ್ ಸ್ಪೆಷಲಿಸ್ಟ್ ರಾಘವೇಂದ್ರ 2011ರಲ್ಲೇ ಟೀಂ ಇಂಡಿಯಾ ಪಾಳೆಯ ಸೇರಿಕೊಂಡಿರುವ ರಾಘವೇಂದ್ರ, ವಿಶ್ವಕಪ್‍ನಲ್ಲಿ ತಂಡದ ಯಶಸ್ಸಿಗೆ ಕಾರಣನಾಗಿ ನಿಂತಿದ್ದಾನೆ.

Throw Down Specialist : ಭಾರತ ಕ್ರಿಕೆಟ್ ತಂಡದಲ್ಲಿ ಮಿಂಚುತ್ತಿದ್ದಾನೆ ಕನ್ನಡಿಗ ರಾಘವೇಂದ್ರ

Author

error: