ನವದೆಹಲಿ : ನ್ಯೂಸ್ ಕ್ಲಿಕ್ ಸ್ಥಾಪಕ ಪ್ರಭಿರ್ ಪುರ್ಕಾಯಸ್ಥ ಅವರನ್ನು ಭಯೋತ್ಪಾದನಾ ನಿಗ್ರಹ ಕಾನೂನಿನ ಅಡಿಯಲ್ಲಿ ಬಂಧನಕ್ಕೊಳಪಡಿಸಿರುವುದನ್ನು ಅಸಿಂಧುಗೊಳಿಸಿರುವ ಸುಪ್ರೀಂ ಕೋರ್ಟ್ ಅವರನ್ನು ಬಂಧಮುಕ್ತಗೊಳಿಸುವಂತೆ ಹೇಳಿದೆ. ಈ ಮೂಲಕ ಸ್ವತಂತ್ರ ಪತ್ರಿಕೋದ್ಯಮವನ್ನು ಉಳಿಸುವ ಕೆಲಸವನ್ನು ನ್ಯಾಯಾಲಯ ಮಾಡಿದೆ,

ನ್ಯಾ.ಬಿ ಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಪ್ರಭಿರ್ ಪುರ್ಕಾಯಸ್ಥ ವಿರುದ್ಧ ಸಲ್ಲಿಸಿದ್ದ ಎಫ್ಐಆರ್ ನಲ್ಲಿ ನ್ಯೂಸ್ ಕ್ಲಿಕ್ ನ್ಯೂಸ್ ಪೋರ್ಟಲ್ ಸಂಸ್ಥೆ ಭಾರತದ ಸಾರ್ವಭೌಮತೆಗೆ ಧಕ್ಕೆ ಉಂಟುಮಾಡುವುದಕ್ಕಾಗಿ ಮತ್ತು ದೇಶದ ವಿರುದ್ಧ ಅಸಮಾಧಾನವನ್ನು ಉಂಟುಮಾಡುವುದಕ್ಕಾಗಿ ಚೀನಾದಿಂದ ಹಣಕಾಸು ನೆರವು ಪಡೆಯುತ್ತಿತ್ತು ಎಂದು ಆರೋಪಿಸಲಾಗಿತ್ತು.

2019 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಹಾಳುಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ ಗುಂಪಿನೊಂದಿಗೆ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು.

ಈ ಆರೋಪಗಳನ್ನು ಮಾಡಿ ಪುರ್ಕಾಯಸ್ಥ ಅವರನ್ನು ಕಳೆದ ವರ್ಷ ಜೈಲಿಗೆ ಅಟ್ಟಲಾಗಿತ್ತು. ದೆಹಲಿ ಪೊಲೀಸರು ಈ ಸಂಬಂಧದಲ್ಲಿ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಮಾಡಿದ ಆರೋಪಗಳಿಗೆ ಸಮರ್ಥನೆ ಇರಲಿಲ್ಲ. ಇದನ್ನೆಲ್ಲ ಗಮನಿಸಿದ ನ್ಯಾಯಾಲಯ ಪುರ್ಕಾಯಸ್ಥ ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶ ನೀಡಿತು.

Author

Leave a Reply

Your email address will not be published. Required fields are marked *