ಕರ್ನಾಟಕಕ್ಕೆ ಯಾವುದೇ ಅನುದಾನ ತಡೆಹಿಡಿದಿಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

Niramala Sitharaman : ಜಿಎಸ್ ಟಿ ಪಾಲಿನಲ್ಲಿ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾದ ಬಗ್ಗೆ ಅವರು ಯಾವುದೇ ಪ್ರಸ್ತಾಪ ಮಾಡಿಲ್ಲ. ರಾಜ್ಯದ ಬರಗಾಲ ಪರಿಸ್ಥಿತಿಯ ಬಗ್ಗೆ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಹೋಗಿದೆ.

ಬೆಂಗಳೂರು : ಕರ್ನಾಟಕಕ್ಕೆ ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಜಾರಿಕೆಯ ಉತ್ತರ ನೀಡಿದ್ದಾರೆ. ಕರ್ನಾಟಕ ಸರ್ಕಾರ ಎತ್ತಿರುವ ತಾತ್ವಿಕ ಪ್ರಶ್ನೆ ಮತ್ತು ತಾರತಮ್ಯ ನೀತಿಯ ಬಗ್ಗೆ ಮಾತನಾಡದೇ ಕರ್ನಾಟಕಕ್ಕೆ ಯಾವುದೇ ಅನುದಾನ ತಡೆ ಹಿಡಿದಿಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಇಂದು ಮಾತನಾಡುತ್ತಿದ್ದ ಅವರು ಕೆಲವೊಂದು ಅಂಕಿ ಅಂಶಗಳನ್ನು ನೀಡಿದ್ದಾರೆ. ಆದರೆ ತೀವ್ರ ಬರಗಾಲದ ಪರಿಸ್ಥಿತಿಯನ್ನು ಎದುರಿಸುತ್ತಿರುವ ರಾಜ್ಯಕ್ಕೆ ಯಾಕೆ ಹೆಚ್ಚುವರಿ ಅನುದಾನ ನೀಡಿಲ್ಲ ಎಂಬ ಪ್ರಶ್ನೆಗೆ ಅವರ ಬಳಿ ಉತ್ತರ ಇಲ್ಲ.

ಯುಪಿಎ ಆಡಳಿತ ಅವಧಿಗೆ ಹೋಲಿಸಿದರೆ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಹೆಚ್ಚಿನ ಅನುದಾನವನ್ನು ನೀಡಿದೆ. ಯುಪಿಎ ಇದ್ದಾಗ ಸುಮಾರೌ 81 ಸಾವಿರ ಕೋಟಿ ಅನುದಾನ ನೀಡಲಾಗಿತ್ತು. ಈಗ ಅದು ಲಕ್ಷ ಕೋಟಿಯನ್ನು ದಾಟಿದೆ ಎಂಬುದು ಅವರ ವಾದ. ಜೊತೆಗೆ ಬೆಂಗಳೂರಿನ ಅಭಿವೃದ್ಧಿಗೆ ನೀಡಲಾದ ಅನುದಾನದ ವಿವರವನ್ನು ಅವರು ನೀಡಿದ್ದಾರೆ`

ಆದರೆ ಜಿಎಸ್ ಟಿ ಪಾಲಿನಲ್ಲಿ ದಕ್ಷಿಣ ರಾಜ್ಯಗಳಿಗೆ ಆಗುತ್ತಿರುವ ಅನ್ಯಾದ ಬಗ್ಗೆ ಅವರು ಯಾವುದೇ ಪ್ರಸ್ತಾಪ ಮಾಡಿಲ್ಲ. ರಾಜ್ಯದ ಬರಗಾಲ ಪರಿಸ್ಥಿತಿಯ ಬಗ್ಗೆ ಕೇಂದ್ರ ತಂಡ ರಾಜ್ಯಕ್ಕೆ ಭೇಟಿ ನೀಡಿ ಹೋಗಿದೆ. ಆದರೂ ಒಂದು ಪೈಸೆ ರಾಜ್ಯಕ್ಕೆ ಬಂದಿಲ್ಲ ಎಂಬ ಆರೋಪ ಬಗ್ಗೆಯೂ ಅವರು ಉತ್ತರ ನೀಡಿಲ್ಲ.

Author

error: