ಬೆಂಗಳೂರು: ಮಂಡ್ಯ ಲೋಕಸಭಾ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಅಂತಿಮ ತೀರ್ಮಾನ ಆಗಿಲ್ಲ ಎಂದು ಸಂಸತ್ ಸದಸ್ಯೆ ಸುಮಲತಾ ಅಂಬರೀಶ್ ಹೇಳಿದ್ದಾರೆ
ದೆಹಲಿಯಿಂದ ಬೆಂಗಳೂರಿಗೆ ಹಿಂತಿರುಗಿದ ನಂತರ ಮಾತನಾಡುತ್ತಿದ್ದ ಅವರು ಇದೇ ತಿಂಗಳ 22 ರಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದು ಅವರು ತಿಳಿಸಿದರು.
ಮೂರು ದಿನಗಳ ಕಾಲ ದೆಹಲಿಯಲ್ಲಿದ್ದ ಅವರು ಬಿಜೆಪಿ ಅಧ್ಯಕ್ಷ ನಡ್ಡಾ, ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಲಹೆ ನೀಡಲಾಗಿತ್ತು. ಆದರೆ ಸುಮಲತಾ ಇದಕ್ಕೆ ಒಪ್ಪಿರಲಿಲ್ಲ.
ಈಗಲೂ ಸಹ ತಾವು ಮಂಡ್ಯದಿಂದಲೇ ಸ್ಪರ್ಧಿಸುವುದಾಗಿ ಅವರು ಪಟ್ಟು ಹಿಡಿದಿದ್ದಾರೆ. ಜೆಡಿಎಸ್ ಕೂಡ ಈ ಮಂಡ್ಯ ತನಗೇ ಬೆಕು ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಬಿಜೆಪಿ ವರಿಷ್ಠರು ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ.
