ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಉಗ್ರಗಾಮಿಗಳು ನಡೆಸಿದ ದಾಳಿಯಲ್ಲಿ ಸೈನಿಕರೊಬ್ಬರು ಹುತಾತ್ಮರಾಗಿದ್ದಾರೆ. ಭಾರತೀಯ ವಾಯು ಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರಗಾಮಿಗಳು ನಿನ್ನೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಹಲವು ಯೋಧರು ಗಾಯಗೊಂಡಿದ್ದರು.
ಅನಂತನಾಗ್ ರಜೌರಿ ಲೋಕಸಭಾ ಕ್ಷೇತ್ರಕ್ಕೆ ಈ ಪೂಂಚ್ ಪ್ರದೇಶವೂ ಬರುತ್ತದೆ. ಇನ್ನು ಮೂರು ವಾರಗಳಲ್ಲಿ ಇಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಇಲ್ಲಿ ದಾಳಿ ನಡೆದಿರುವುದು ಸಾಮಾನ್ಯ ಜನರಲ್ಲಿ ಆತಂಕ ಮೂಡಿಸಿದೆ.
ವಾಯುಪಡೆಯ ವಾಹಾನಗಳು ಪೂಂಚ್ ನ ಸುರಾನಕೋಟ್ ಪ್ರದೇಶದಿಂಡ ಸನಾಯ್ ಕಡೆಗೆ ತೆರಳುತ್ತಿದ್ದಾಗ ನಾಲ್ವರು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು ಎಂದು ವರದಿ ತಿಳಿಸಿದೆ.
ಇದರಿಂದ ಐವರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡರು. ಇವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಈ ಇಬ್ಬರಲ್ಲಿ ಒಬ್ಬರು ಮಿಲಟರಿ ಆಸತ್ರೆಯಲ್ಲಿ ಅಸುನೀಗಿದ್ದಾರೆ.
