ಕರ್ನಾಟಕಕ್ಕೆ ಬಂದು ಮತ ಕೇಳಲು ನಿಮಗೆ ನೈತಿಕತೆ ಇದೆಯಾ ? ಕೇಂದ್ರ ಗೃಹ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕದಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿದ್ದಾರೆ. ಅಮಿತ್ ಶಾ ಬೆಂಗಳೂರಿನಲ್ಲಿ ಕಾಂಗ್ರೆಸ್ ಮೇಲೆ ದಾಳಿ ಮಾಡಿದರೆ, ಮೈಸೂರಿನಿಂದಲೇ ಸಿದ್ದರಾಮಯ್ಯ ಪ್ರಶ್ನೆಗಳ ಸುರಿ ಮಳೆ ಗೈದಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ, ಜೆ ಪಿ ನಡ್ಡಾ, ಪ್ರಧಾನಿ ಮೋದಿಯವರು ಯಾರೇ ಬರಲಿ ಮತದಾರರ ಮನ ಗೆಲ್ಲಲು ಸಾಧ್ಯವಾಗುವುದಿಲ್ಲ. ಅಮಿತ್ ಶಾ…

ಕಾಂಗ್ರೆಸ್ ತನ್ನ ಆಡಳಿತಾವಧಿಯಲ್ಲಿ 2 ಲಕ್ಷ ಕೋಟಿ ಭ್ರಷ್ಟಾಚಾರ ಮಾಡಿದೆ ಕೇಂದ್ರ ಗೃಹ ಸಚಿವರ ಆರೋಪ. ಹಾಗಿದ್ದರೆ ಕಳೆದ 10 ವರ್ಷದಿಂದ ಹಗರಣ ಹೊರಗೆ ಹಾಕದೇ ಇವರು ಚಳ್ಳೆ ಹಣ್ಣು ತಿನ್ನುತ್ತಿದ್ದರಾ ?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಎನ್ ಡಿ ಎ ಮತ್ತು ಇಂಡಿಯಾ ಒಕ್ಕಟವನ್ನು ಹೋಲಿಸಲು ಸಾಧ್ಯವೇ ಇಲ್ಲ. ಇಂಡಿಯಾ ಒಕ್ಕೂಟ ಪರಿವಾರವಾದಿಗಳು ಮತ್ತು ಭ್ರಷ್ಟಾಚಾರಿಗಳ ಒಕ್ಕೂಟ ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಆರೋಪಿಸಿದ್ದಾರೆ. ಈ ಆರೋಪವನ್ನು ಅವರು ಮಾಡಿದ್ದು ಬೆಂಗಳೂರಿನಲ್ಲಿ. ಬೆಳಿಗ್ಗೆ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಜೊತೆ…

ರಾಯಲ್ ಚಾಲೇಂಜರ್ಸ್ ಗೆ ಇಂದು ಅಗ್ನಿ ಪರೀಕ್ಷೆ.;ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಆಡುತ್ತಾ ಆರ್ ಸಿ ಬಿ ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ತಂಡ ಈ ಬಾರಿ ಯಾವ ತಂಡಕ್ಕೂ ಸವಾಲನ್ನೇ ನೀಡುತ್ತಿಲ್ಲ. ಇದುವರೆಗೆ ಆಡಿರುವ ಮೂರು ಪಂಡ್ಯಗಳಲ್ಲಿ ಗೆದ್ದಿರುವುದು ಕೇವಲ ಒಂದು ಪಂದ್ಯ ಮಾತ್ರ.ಹೀಗಾಗಿ ಇವತ್ತಿನ ಪಂದ್ಯ ಬೆಂಗಳೂರು ತಂಡಕ್ಕೆ ಅಗ್ನಿ ಪರೀಕ್ಷೆ. ಯಾಕೆಂದರೆ ಅಂಕ ಪಟ್ಟಿಯಲ್ಲಿ ಆರ್ ಸಿ ಬಿ ಈಗ ಒಂಬತ್ತನೆಯ ಸ್ಥಾನ. ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಂಗಳವಾರ…

ಮುಂಬೈ ಇಂಡಿಯನ್ಸ್ ಗೆ ಸತತ ಸೋಲು; ರೋಹಿತ್ ಶರ್ಮಾ ಬದಲಿಸಿ ತಪ್ಪು ಮಾಡಿತೆ ಆಡಳಿತ ವರ್ಗ ?

ಮುಂಬೈ : ಪ್ರಾಯಶಃ ಈ ಬಾರಿಯ ಐಪಿಎಲ್ ನ ಅತಿ ಮಹತ್ವದ ಬೆಳವಣಿಗೆ ಎಂದರೆ ಮುಂಬೈ ಇಂಡಿಯನ್ ತಂಡದ ಕಳಪೆ ಪ್ರದರ್ಶನ. ಐದು ಬಾರಿಯ ಚಾಂಪಿಯನ್ ತಂಡ ಸತತ ಮೂರನೆಯ ಸೋಲನ್ನು ನಿನ್ನೆ ಅನುಭವಿಸಿತು. ರಾಜಸ್ಥಾನ್ ರಾಯಲ್ಸ್ ತಂಡದಿಂದ ಮುಖ ಮುಸಡಿ ನೋಡದೇ ಹೊಡೆಸಿಕೊಂಡಿತು. ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮುಂಬೈ ತಂಡದ…

ಮತ್ತೆ ಒಂದಾಯ್ತು ‘ದಸರಾ’ ಜೋಡಿ.. ನ್ಯಾಚುರಲ್ ಸ್ಟಾರ್ ನಾನಿ 33ನೇ ಸಿನಿಮಾ ಅನೌನ್ಸ್..

ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್ ಕಟ್ ಹೇಳಿ ಮೊದಲ ಚಿತ್ರದಲ್ಲೇ ನಿರ್ದೇಶಕರಾಗಿ ಖ್ಯಾತಿ ಗಳಿಸಿರುವ ಶ್ರೀಕಾಂತ್ ಒಡೆಲಾ, ನಿರ್ಮಾಪಕ ಸುಧಾಕರ್ ಚೆರುಕುರಿ ಹಾಗೂ ನಾನಿ ಎರಡನೇ ಬಾರಿಗೆ ಒಂದಾಗಿದ್ದಾರೆ. ಈ ಕ್ರೇಜಿ ಕಾಂಬೋದ…

ಜನರ ಆಶೀರ್ವಾದ ಇರುವವರೆಗೆ ಯಾವುದೇ ಜೀವ ಬೆದರಿಕೆಗಳಿಗೆ ಅಂಜುವುದಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ನನಗೆ ಎಷ್ಟೇ ಜೀವಬೆದರಿಕೆಗಳು ಬರಲಿ, ಎದುರಿಸುತ್ತೇನೆ. ಜನರ ಆಶೀರ್ವಾದ ಇರುವವರೆಗೆ ಯಾವುದೇ ಜೀವ ಬೆದರಿಕೆಗಳಿಗೆ ಅಂಜುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ರಿಂಗ್ ರಸ್ತೆಯ ಮೊಘಲ್ ಗಾರ್ಡನ್ ನಲ್ಲಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ದೇಶದ ಸ್ವಾತಂತ್ರ್ಯ ಹಿನ್ನಲೆ ಹಾಗೂ…

ಸಾಗರ್ ಪುರಾಣಿಕ್ ನಿರ್ದೇಶನದ ‘ವೆಂಕ್ಯಾ’ಚಿತ್ರಕ್ಕೆ ಶಿಮ್ಲಾ ಬೆಡಗಿ ರೂಪಾಲಿ ಎಂಟ್ರಿ

ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ ಬಳಗಕ್ಕೆ ಯುವ ನಟಿಯರೊಬ್ಬರ ಆಗಮನವಾಗಿದೆ. ಶಿಮ್ಲಾ ಸುಂದರಿ ರೂಪಾಲಿ ಸೂದ್ ಸಾಗರ್ ಪುರಾಣಿಕ್ ಚಿತ್ರದಲ್ಲಿ ನಟಿಸ್ತಿದ್ದು, ಈ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಮೂಲತಃ ಶಿಮ್ಲಾದವರಾದ ರೂಪಾಲಿ…

ಸೌಮ್ಯರೆಡ್ಡಿ ನಮ್ಮ ಮನೆ ಮಗಳು, ಅವರನ್ನು 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ಡಿ ಕೆ ಶಿವಕುಮಾರ್

ಬೆಂಗಳೂರು : ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮತದಾರರಲ್ಲಿ ಮನವಿ ಮಾಡಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರ ನಾಮಪತ್ರ ಸಲ್ಲಿಕೆಗೂ ಮುಂಚಿತವಾಗಿ ಜಯನಗರದಲ್ಲಿ ನಡೆದ ಮೆರವಣಿಗೆ…

ಆಸ್ಪತ್ರೆಗೆ ದಾಖಲಾದ ನಟ ಶಿವರಾಜ್ ಕುಮಾರ್ ; ಆತಂಕ ಪಡಬೇಕಾಗಿಲ್ಲ…

ಬೆಂಗಳೂರು : ಸ್ಯಾಂಡಲ್ ನಟ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದರೆ ಆತಂಕ ಪಡುವ ಅಗತ್ಯ ಇಲ್ಲ. ಒಂದೆರಡು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ತಮ್ಮ ಪತ್ನಿ ಗೀತಾ ಶಿವರಾಜ್​​ ಕುಮಾರ್​ ಅವರ ಪರವಾಗಿ ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ, ಎಡಬಿಡದ ಚಿತ್ರೀಕರಣದಿಂದಾಗಿ ಅವರ ಸ್ಪಲ್ಪ ಆರೋಗ್ಯದ ಸಮಸ್ಯೆ ಉಂಟಾಗಿತ್ತು.…

ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ; ಕಣಕ್ಕಿಳಿದವರು ಯಾರು ?ಯದುವೀರ್, ಸೌಮ್ಯ ರೆಡ್ಡಿ, ಸುಧಾಕರ್ ಸೇರಿ ಹಲವರಿಂದ ನಾಮಪತ್ರ

ಬೆಂಗಳೂರು : ಏಪ್ರಿಲ್ 26 ರಂದು ನಡೆಯಲಿರುವ ಮೊದಲ ಹಂತದ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ನಾಮಪತ್ರ ಸಲ್ಲಿಕೆ ಇಂದು ಪ್ರಾರಂಭವಾಯಿತು, ಸೋಮವಾರ ಹಲವು ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.…