Prajwal Revanna Arrest: ಲೈಂಗಿಕ ಕಿರುಕುಳ ಪ್ರಕರಣ ; ಸಂಸದ ಪ್ರಜ್ವಲ್ ರೇವಣ್ಣನನ್ನ ವಶಕ್ಕೆ ಪಡೆದ SIT ಅಧಿಕಾರಿಗಳು

Prajwal Revanna Arrest: ಜರ್ಮಿನಿಯ ಮ್ಯೂನಿಕ್ ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗುರುವಾರ ಮಧ್ಯರಾತ್ರಿ ಆಗಮಿಸುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದರು.

ಬೆಂಗಳೂರು : ಅಶ್ಲೀಲ ವಿಡಿಯೋಗಳ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ದೇಶ ತೊರೆದಿದ್ದ ಸಂಸದ ಪ್ರಜ್ವಲ್ ರೇವಣ್ಣ, ಕಡೆಗೂ ಬೆಂಗಳೂರಿಗೆ ವಾಪಾಸ್ಸಾಗಿದ್ದು, ಮಧ್ಯರಾತ್ರಿ ಎಸ್ಐಟಿ ಪೊಲೀಸರು ಬಂಧಿಸಿದ್ದಾರೆ.

ಜರ್ಮಿನಿಯ ಮ್ಯೂನಿಕ್ ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗುರುವಾರ ಮಧ್ಯರಾತ್ರಿ ಆಗಮಿಸುತ್ತಿದ್ದಂತೆ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದರು.

ಲುಕ್ ಔಟ್ ನೋಟಿಸ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಇಮ್ಮಿಗ್ರೇಶನ್ ಅಧಿಕಾರಿಗಳು ಪ್ರಜ್ವಲ್ನನ್ನು ವಶಕ್ಕ ಪಡೆದು ಎಸ್ ಐ ಟಿ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ.

ಕಳೆದ 35 ದಿನಗಳಿಂದ ವಿದೇಶದಲ್ಲಿ ಅಡಗಿ ಕೂತಿದ್ದ ಪ್ರಜ್ವಲ್ ಮೇ 31ಕ್ಕೆ ಎಸ್ಐಟಿ ವಿಚಾರಣೆಗೆ ಹಾಜರಾವುದಾಗಿ ವಿಡಿಯೋ ಬಿಡುಗಡೆ ಮಾಡಿದ್ದರು.

Author

error: