ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ಹಲ್ಲೆ; ಫೋಟೋ ಜರ್ನಲಿಸ್ಟ್ ಗಳ ಕುತ್ತಿಗೆ ಹಿಡಿದ ಪೊಲೀಸರು, ಮಾಧ್ಯಮ ಸಂಘಟನೆಗಳ ಪ್ರತಿಭಟನೆ

ನವದೆಹಲಿ : ಆಮ್ ಆದ್ಮಿ ಪಕ್ಷದ ಪ್ರತಿಭಟನೆ ಸಂದರ್ಭದಲ್ಲಿ ಫೋಟೋ ಜರ್ನಲಿಸ್ಟ್ ಗಳ ಮೇಲೆ ದೆಹಲಿ ಪೋಲಿಸರು ಹಲ್ಲೆ ನಡೆಸಿದ್ದಾರೆ. ಪತ್ರಕರ್ತರ ಕುತ್ತಿಗೆ ಹಿಡಿದು ಹಲ್ಲೆ ನಡೆಸಿದ ಫೋಟೋವನ್ನು ಪತ್ರಕರ್ತರ ಸಂಘಗಳು ಹಂಚಿಕೊಂಡಿವೆ.

ದೆಹಲಿ ಪತ್ರಕರ್ತರ ಸಂಘ ಮತ್ತು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಪ್ರತ್ಯೇಕ್ ಹೇಳಿಕೆ ನೀಡಿ ನಿವೃತ್ತ ನ್ಯಾಯಾಧೀಶರಿಂದ ಈ ಪ್ರಕರಣದ ಬಗ್ಗೆ ತನಿಖೆ ನಡೆಸಬೇಕು ಎಂದು ಈ ಸಂಘಟನೆಗಳು ಒತ್ತಾಯಿಸಿವೆ.

ತಪ್ಪಿತಸ್ಥ ಪೊಲೀಸರ ವಿರುದ್ಧ ಕೇಂದ್ರ ಗೃಹ ಇಲಾಖೆ ಮತ್ತು ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂಬುದು ಪತ್ರಕರ್ತರ ಆಗ್ರಹವಾಗಿದೆ.

ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದನ್ನು ವರದಿ ಮಾಡಲು ಪತ್ರಕರ್ತರು ಅಲ್ಲಿಗೆ ತೆರಳಿದ್ದರು. ಆಗ ಪೋಲಿಸರಿಂದ ಹಲ್ಲೆಯ ಯತ್ನ ನಡೆಯಿತು ಎಂದು ಹೇಳಲಾಗಿದೆ. ದೆಹಲಿ ಪೋಲಿಸರು ಕೇಂದ್ರ ಗೃಹ ಇಲಾಖೆಯ ಆಡಳಿತಕ್ಕೆ ಒಳಪಟ್ಟಿದ್ದಾರೆ. ಹೀಗಾಗಿ ಕೇಂದ್ರ ಗೃಹ ಇಲಾಖೆ ಇದರ ಜವಾಬ್ದಾರಿಯನ್ನು ವಹಿಸಿಕೊಂಡು ಕ್ರಮ ಕೈಗೊಳ್ಳಬೇಕಾಗಿದೆ.

Author

error: