ಸುದ್ದಿಗೋಷ್ಠಿ ನಡೆಸಲಿರುವ ಸಚಿವ ವಿನಯ್ ಕುಲಕರ್ಣಿ

ವೀರಶೈವ ಲಿಂಗಾಯತ ಪ್ರತ್ಯಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ವಿನಯ್ ಕುಲಕರ್ಣಿ ಇಂದು ಸುದ್ದಿಗೋಷ್ಠಿ ನಡೆಸಲಿದ್ದಾರೆ.. ಸಿದ್ದಗಂಗಾ ಶ್ರೀಗಳು ಪ್ರತ್ಯಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಆಗಿರುವ ಗೊಂದಲ ನಿವಾರಣೆಗೆ ಸಚಿವ ವಿನಯ್ ಕುಲಕರ್ಣಿ, ಶಾಸಕ ಬಸವರಾಜ್ ಹೊರಟ್ಟಿ, ಹಾಗು ಬಿ.ಆರ್.ಪಾಟೀಲ್ ನಿವೃತ್ತ ಐಎಎಸ್ ಅಧಿಕಾರಿ ಜಾಮಧಾರ್ ಸುದ್ದಿಗೋಷ್ಟಿಯಲ್ಲಿ ಭಾಗವಹಿಸಲಿದ್ದಾರೆ.. ಸಿದ್ದಗಂಗಾ ಶ್ರೀಗಳು ಪ್ರತ್ಯಕ ಲಿಂಗಾಯತ ಧರ್ಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ನೀಡಿದ್ದರು.. ಇದೀಗ ಸಚಿವ ಎಂ.ಬಿ.ಪಾಟೀಲ್ ಹೇಳಿಕೆ ಗೊಂದಲದಿಂದ ಕೂಡಿದೆ ಎಂದು ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು.. ಈ ಹಿನ್ನಲೆಯಲ್ಲಿ ಸಚಿವ ವಿನಯ್ ಕುಲಕರ್ಣಿ ಇಂದು ಸುದ್ದಿಗೋಷ್ಟಿ ನಡೆಸುವ ಮೂಲಕ ಗೊಂದಲಗಳಿಗೆ ತೆರೆ ಎಳೆಯುವ ಸಾಧ್ಯತೆ ಇದೆ..

0

Leave a Reply

Your email address will not be published. Required fields are marked *