ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿದರೆ ಪ್ರತಿಭಟನೆಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆದಿರುವ ಬೆನ್ನಲ್ಲೇ ವಿದ್ಯಮಾನಗಳು ಬಿರುಸುಗೊಂಡಿವೆ. ಒಂದು ವೇಳೆ ಸರ್ಕಾರ ರಚಿಸಲು ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡಿದರೆ ಪ್ರತಿಭಟನೆ ನಡೆಸಲು ಕಾಂಗ್ರೆಸ್-ಜೆಡಿಎಸ್ ನಾಯಕರು ಸಜ್ಜಾಗಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟಿಸಲು ಕಾಂಗ್ರೆಸ್ ಮುಖಂಡರು ತೀರ್ಮಾನಿಸಿದ್ದು, ಪ್ರತಿಭಟನೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸಾಥ್ ನೀಡಲಿದ್ದಾರೆ. ಜೆಡಿಎಸ್​​ನ ಎಲ್ಲ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಲು ತೀರ್ಮಾನಿಸಿದ್ದು, ಈ ಮೂಲಕ ರಾಜ್ಯಪಾಲರ ಮೇಲೆ ಒತ್ತಡ ತರಲು ಕಾಂಗ್ರೆಸ್-ಜೆಡಿಎಸ್ ಮುಂದಾಗಿವೆ. ಮತ್ತೊಂದೆಡೆ ಕಾಂಗ್ರೆಸ್ ಕಾನೂನಾತ್ಮಕವಾಗಿ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ.

0

Leave a Reply

Your email address will not be published. Required fields are marked *