ತಾಜಾ ಸುದ್ದಿ: ಬೆಂಗಳೂರಿಗೆ ಮಳೆ ಎಚ್ಚರಿಕೆ | GTTC ಅರ್ಜಿ ಆರಂಭ | IPL ಫೈನಲ್ ಇಂದು
ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಂಸದ ಜಿ ಕುಮಾರ ನಾಯಕ
Raichur MP G Kumar Nayak: ವಿಧಾನಸೌಧದಲ್ಲಿ ಭೇಟಿಯಾಗಿ ರಾಯಚೂರು ಮತ್ತು ಯಾದಗಿರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ಸಂಕ್ಷಿಪ್ತವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬೆಂಗಳೂರು : ರಾಜ್ಯ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳಾದ ಶಾಲಿನಿ ರಜಿನೀಶ್ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರವಿಶಂಕರ್ ಐಎಎಸ್ ಅವರನ್ನು ಲೋಕಸಭಾ ಸಂಸದರಾದ ಜಿ ಕುಮಾರ್ ನಾಯಕ ಅವರು ಭೇಟಿ ಮಾಡಿ ರಾಯಚೂರು ಲೋಕಸಭಾ ಕ್ಷೇತ್ರದ ಅಭಿವೃದ್ಧಿ ವಿಷಯದ ಬಗ್ಗೆ ಚರ್ಚಿಸಿದರು.
ವಿಧಾನಸೌಧದಲ್ಲಿ ಭೇಟಿಯಾಗಿ ರಾಯಚೂರು ಮತ್ತು ಯಾದಗಿರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ಕುರಿತು ಸಂಕ್ಷಿಪ್ತವಾಗಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ರಾಯಚೂರು ಹಾಗೂ ಯಾದಗಿರಿ ಲೋಕಸಭಾ ಕ್ಷೇತ್ರದ ಮಹಾ ಜನತೆ ಸರ್ವಾಂಗಿಣ ಅಭಿವೃದ್ಧಿಯ ದೃಷ್ಟಿಕೋನದೊಂದಿಗೆ ನನ್ನ ಮೇಲೆ ನಂಬಿಕೆ ವಿಶ್ವಾಸವನ್ನಿಟ್ಟು ಸಂಸದನನ್ನಾಗಿ ಆಯ್ಕೆ ಮಾಡಿದ್ದಾರೆ. ಕ್ಷೇತ್ರದ ಜನರ ನಂಬಿಕೆ ವಿಶ್ವಾಸದಂತೆ ಅಭಿವೃದ್ಧಿ ಕೆಲಸ ಮಾಡಲು ಸಹಕರಿಸಬೇಕೆಂದು ತಿಳಿಸಿದರು.
