Rain Update: ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Heavy Rain in Karnataka: ಜುಲೈ 7ರ ನಂತರ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮೂರು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರ ಮುಂದುವರೆಯಲಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಹೆಚ್ಚು ಮಳೆ ಸುರಿಯುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮಳೆ ಇದೇ ರೀತಿ ಮುಂದುವರೆಯಲಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಜುಲೈ 7ರವರೆಗೆ ಅತ್ಯಧಿಕ ಮಳೆ ಬರುವ ಪ್ರಯುಕ್ತ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಜುಲೈ 7ರ ನಂತರ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮೂರು ದಿನ ಆರೆಂಜ್ ಅಲರ್ಟ್ ನೀಡಲಾಗಿದೆ.

ಇನ್ನೂ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಕೋಲಾರ, ರಾಮನಗರ, ಹಾಸನ, ಕೊಡಗು, ತುಮಕೂರು, ದಾವಣಗೆರೆ, ಬಳ್ಳಾರಿ ಹಾಗೂ ಇನ್ನಿತರ ಕಡೆಗಳಲ್ಲಿ ಆಗಾಗ ಹಗುರದಿಂದ ಸಾಧಾರಣವಾಗಿ ಮಳೆ ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ.

Author

error: