ಅಭಿಮಾನಿಗಳಿಗೆ ರಕ್ಷಿತ್ ಶೆಟ್ಟಿ ಸಿಹಿ ಸುದ್ದಿ ನೀಡಿದ್ದಾರೆ..

ಕನ್ನಡದ ಹೆಸರಾಂತ ನಟ, ನಿರ್ದೇಶಕ ರಕ್ಷಿತ್​ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ.. ಇದೇ ದಿನ ಅಭಿಮಾನಿಗಳಿಗೆ ರಕ್ಷಿತ್ ಶೆಟ್ಟಿ ಸಿಹಿ ಸುದ್ದಿ ನೀಡಿದ್ದಾರೆ.. ಜುಲೈ 3ರಂದು ಕುಶಾಲ್ ನಗರದ ರಶ್ಮಿಕಾ ನಿವಾಸದಲ್ಲಿ ನಿಶ್ಚಿತಾರ್ಥ ನೆರವೇರಲಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.. ಇನ್ನು 34 ನೇ ವಸಂತಕ್ಕೆ ಕಾಲಿಡ್ತಿರೋ ರಕ್ಷಿತ್​ಗೆ ಟ್ವಿಟ್ಟರ್, ಹಾಗೂ ಫೆಸ್​ ಬುಕ್​ಗಳಲ್ಲಿ ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.. ಸಾವಿರಾರು ಸಂಖ್ಯೆಯಲ್ಲಿ ವಿಶ್​ ಮಾಡುತ್ತಿದ್ದಾರೆ. ಅಲ್ಲದೇ ಕಿರಿಕ್​ ಪಾರ್ಟಿ ಚಿತ್ರದಲ್ಲಿ ರಕ್ಷಿತ್​ಗೆ ಜೋಡಿಯಾಗಿದ್ದ ರಶ್ಮಿಕಾ ಮಂದಣ್ಣ ಕೂಡಾ ತಮ್ಮ ಟ್ವಿಟ್ಟರ್​ನಲ್ಲಿ  ನಮ್ಮ ಮನೆಗೆ ಇನ್ನೊಬ್ರು ವಿಶೇಷ ಅತಿಥಿ ಸೇರ್ಪಡೆ ಆಗುತ್ತಿದ್ದಾರೆ ಎಂದು  ವಿಶೇಷವಾಗಿ ವಿಶ್​ ಮಾಡಿದ್ದಾರೆ.

0

Leave a Reply

Your email address will not be published. Required fields are marked *