ಬೆಂಗಳೂರು : ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ವಿಚಾರವಾಗಿ ಇಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹಾರ ಸಚಿವರಾದ ಕೆ ಹೆಚ್. ಮುನಿಯಪ್ಪ ಅವರು ಭೇಟಿ ಮಾಡಿದರು‌.

ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರೇ ಆದರು ನಾವೆಲ್ಲಾ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ನಾನು 7 ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದು ನಾನು ಒಂದು ಜಿಲ್ಲೆಗೆ ಸೀಮಿತವಾದ ನಾಯಕ ಅಲ್ಲಾ ನಾನು ಈ ರಾಜ್ಯದಾದ್ಯಂತ ನನ್ನದೇ ಆದ ಕಾರ್ಯಕರ್ತರನ್ನು ಹೊಂದಿದ್ದೇನೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ.ಎಂಸಿ ಸುಧಾಕರ್, ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬೈರತಿ ಸುರೇಶ್ ಹಾಗೂ ಎಲ್ಲಾ ಶಾಸಕರು ನಾವು ಒಗ್ಗಟ್ಟಿ ನಿಂದ ಕೆಲಸ ಮಾಡಿ ಎರಡು ಕ್ಷೇತ್ರಗಳನ್ನು ಗೆಲ್ಲಸಿಕೊಂಡು ಬರುತ್ತೇವೆ ಎಂದು ನಾವು ಅಧ್ಯಕ್ಷರಾದ ಡಿಕೆ‌.ಶಿವಕುಮಾರ್, ಹಾಗೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾತು ಕೊಟ್ಟಿದ್ದೇವೆ ಎಂದು ತಿಳಿಸಿದರು.

ಹೈಕಮಾಂಡ್ ಯಾವ ಅಭ್ಯರ್ಥಿಯನ್ನು  ನೀಡಿದರು ನಾವು ಕೆಲಸ ಮಾಡಲು ಬದ್ದರಾಗಿದ್ದೇವೆ. ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿರುವ 5 ಗ್ಯಾರಂಟಿ ಯೋಜನೆಗಳ ಫಲಪ್ರದವಾಗಿ ನಮಗೆ ಜನರು ಆಶೀರ್ವಾದ ಮಾಡುತ್ತಾರೆ ಎಂದರು

Author

Leave a Reply

Your email address will not be published. Required fields are marked *